ಚಿಕ್ಕಮಗಳೂರು: ಈದ್ ಮಿಲಾದ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಮುಸ್ಲಿಂ ಯುವಕರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಾಕಿದ್ದಾರೆ. ಈ ಕಟೌಟ್‌ನ್ನು ವಿಡಿಯೋ ಮಾಡಿ ಅದಕ್ಕೆ ಪಾಕ್ ಸೇನೆ ಮುಜಾಹಿದ್ ಹಾಡು ಬಳಸಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ವಿಡಿಯೋವನ್ನು ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮುಸ್ಲಿಂ ಯುವಕರು ಹಂಚಿಕೊಂಡಿದ್ದಾರೆ. ಪಾಕಿಸ್ತಾನದ ಮುಜಾಹಿದ್‌ಗೆ ಸಂಬಂಧಿಸಿದ ಹಾಡನ್ನು ಹಾಕಿರೋದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಧನರಾಜ್ ಚಿಕ್ಕಮಗಳೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೋಮು ಸೌಹಾರ್ದ ಕದಡುವ ರೀತಿ ಹಾಡು ಬಳಕೆ ಮಾಡಿ, ಧಾರ್ಮಿಕ ನಂಬಿಕೆಗೆ ಅಪಮಾನ ಮಾಡುವ ರೀತಿ ಹಾಡು ಹಾಕಿದ್ದಾರೆ. ಪಾಕಿಸ್ತಾನದ ಸೈನಿಕರು ಎಂದು ಇರುವ ಹಾಡನ್ನ ಬಳಸಿದ್ದಾರೆ. ಉದ್ದೇಶ ಪೂರ್ವಕವಾಗಿ ದ್ವೇಷ ಹರಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಠಾಣೆಗೆ ದೂರು ದಾಖಲಿಸಿದ್ದಾರೆ. ದೂರಿನನ್ವಯ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7