Breaking News

ಬೀದರ್‌ನಲ್ಲಿ ಬೀದಿ ನಾಯಿ ದಾಳಿಗೆ 5 ತಿಂಗಳ ಕಂದಮ್ಮ ದುರ್ಮರಣ

Spread the love

ಬೀದರ್: ಬೀದಿ ನಾಯಿ ದಾಳಿಗೆ  5 ತಿಂಗಳ ಹಸೂಗೂಸು ದುರಂತ ಅಂತ್ಯ ಕಂಡ ಘಟನೆ ಬೀದರ್  ಜಿಲ್ಲೆಯ ಹುಮ್ನಾಬಾದ್  ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ.

5 ತಿಂಗಳ ಶಿವಾನಿ ಮೃತ ಕಂದಮ್ಮ. ಸುಧಾ ಹಾಗೂ ಸಿದ್ದಪ್ಪ ದಂಪತಿಗೆ ಸೇರಿದ ಹಸೂಗೂಸು ಸಾವನ್ನಪ್ಪಿದೆ. ಮನೆಯ ಪಡಸಾಲೆಯಲ್ಲಿ ಮಗುವನ್ನ ಮಲಗಿಸಿ ತಾಯಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಮನೆಗೆ ನುಗ್ಗಿ ಹಸುಗೂಸನ್ನ ನಾಯಿ ಮನಬಂದಂತೆ ಕಚ್ಚಿ ಬಿಸಾಕಿದೆ.

ಅರಜೀವಾವಸ್ಥೆಯಲ್ಲಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಬೀದರ್‌ನ ಬ್ರಿಮ್ಸ್ನಲ್ಲಿ ಸಾವನ್ನಪ್ಪಿದೆ. ದಂಪತಿಗೆ ಈಗಾಗಲೇ ಮೂವರು ಹೆಣ್ಣುಮಕ್ಕಳಿದ್ದು, ಶಿವಾನಿ ನಾಲ್ಕನೇ ಹೆಣ್ಣು ಮಗುವಾಗಿತ್ತು. ಬೀದಿ ನಾಯಿಗಳಿಗೆ ಕಡಿವಾಣ ಹಾಕದೆ ಮಹಾ ನಿರ್ಲಕ್ಷ್ಯ ಮಾಡುತ್ತಿರುವ ಹುಮ್ನಾಬಾದ್ ಪುರಸಭೆ ಅಧಿಕಾರಿಗಳ ವಿರುದ್ಧ ಪಾಲಕರು ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಸ್ಟ್ರೈಕ್‌ – ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ಸ್ಥಗಿತ?

Spread the loveಬೆಂಗಳೂರು: ಕತ್ರಿಗುಪ್ಪೆಯ ಕಾಮಾಕ್ಯ ಎಲೆಕ್ಟ್ರಿಕಲ್ ಡಿಪೋ 13ರಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಪ್ರತಿಭಟನೆ ನಡೆಸಿದ್ದಾರೆ. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ