Breaking News

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ದಿಢೀರ್ ರೌಂಡ್ಸ್: ರಸ್ತೆಯಲ್ಲೇ ಕಸ ಚೆಲ್ಲಿದವರಿಗೆ ಬಿತ್ತು 5 ಸಾವಿರ ದಂಡ!

Spread the love

ಬೆಳಗಾವಿ ನಗರದ ಸ್ವಚ್ಛತೆ ಕಾಪಾಡುವಲ್ಲಿ ಮಹಾನಗರ ಪಾಲಿಕೆ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ವಾರ್ಡ್ ಸಂಖ್ಯೆ 44ಕ್ಕೆ ಸ್ವತಃ ಆಯುಕ್ತರೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆಯಲ್ಲೇ ಕಸ ಸುರಿದವರಿಗೆ ಸ್ಥಳದಲ್ಲೇ ಬಿಸಿ ಮುಟ್ಟಿಸಿದ್ದಾರೆ.

ಬೆಳಗಾವಿಯ ವಾರ್ಡ್ ಸಂಖ್ಯೆ 44ರ ಮಾರುಕಟ್ಟೆ ಪ್ರದೇಶಕ್ಕೆ ಮಹಾನಗರ ಪಾಲಿಕೆ ಆಯುಕ್ತರಾದ ಕಾರ್ತಿಕ್ ಎಂ., ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾರುಕಟ್ಟೆ ಪ್ರದೇಶದ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಕಸ ಚೆಲ್ಲಿರುವುದನ್ನು ಗಮನಿಸಿದ ಆಯುಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸ್ವಚ್ಛತಾ ನಿಯಮಗಳನ್ನು ಗಾಳಿಗೆ ತೂರಿ ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದಿದ್ದಕ್ಕಾಗಿ ಸಂಬಂಧಪಟ್ಟವರಿಗೆ ಸ್ಥಳದಲ್ಲೇ 5,000 ರೂಪಾಯಿ ದಂಡ ವಿಧಿಸಿ, ಶಿಸ್ತು ಕ್ರಮ ಜರುಗಿಸಿದರು.
ಈ ಭೇಟಿಯ ಸಂದರ್ಭದಲ್ಲಿ ಸಂಬಂಧಿಸಿದ ವಾರ್ಡಿನ ನಗರಸೇವಕ ಆನಂದ ಚವ್ಹಾಣ್, ಪರಿಸರ ಅಧಿಕಾರಿ ಹನುಮಂತ ಕಲಾದಗಿ ಸೇರಿದಂತೆ ಪಾಲಿಕೆಯ ಸಿಬ್ಬಂದಿ ಉಪಸ್ಥಿತರಿದ್ದರು. ನಗರದ ಸೌಂದರ್ಯ ಮತ್ತು ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಇನ್ನು ಮುಂದೆ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಮಾರುಕಟ್ಟೆ ಪ್ರದೇಶದಲ್ಲಿ ಶಿಸ್ತು ಕಾಪಾಡುವಂತೆ ಅಧಿಕಾರಿಗಳಿಗೆ ಇದೇ ವೇಳೆ ಸೂಚನೆ ನೀಡಲಾಯಿತು.


Spread the love

About Laxminews 24x7

Check Also

ಭೀಕರ ಘರ್ಷಣೆಯಲ್ಲಿ ಬಿಜೆಪಿ ಮಾಜಿ ಶಾಸಕನನ್ನೇ ಹೊಡೆದು ಕೊಂದ ಗ್ರಾಮಸ್ಥರು

Spread the loveಜೈಪುರ: ರಾಜಸ್ಥಾನದ  ಭೋಂಡಾ ಗ್ರಾಮದಲ್ಲಿ ನಡೆದ ಭೀಕರ ಘರ್ಷಣೆಯಲ್ಲಿ ಬಿಜೆಪಿ ಮಾಜಿ ಶಾಸಕನನ್ನೇ ಗ್ರಾಮಸ್ಥರು ಹೊಡೆದು ಕೊಂದಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ