Breaking News

ಬೆಳಗಾವಿ ಕೈಗಾರಿಕಾ ಪ್ರದೇಶದಲ್ಲಿ 59 ಗುಂಡುಗಳು ಪತ್ತೆ

Spread the love

ಬೆಳಗಾವಿ: ಬೆಳಗಾವಿ ನಗರದ ಕೈಗಾರಿಕಾ ಪ್ರದೇಶವಾದ ಉದ್ಯಮಬಾಗದಲ್ಲಿ  ಪೌರಕಾರ್ಮಿಕರು ನಡೆಸುತ್ತಿದ್ದ ಕಸ ವಿಲೇವಾರಿ ಕಾರ್ಯದ ವೇಳೆ ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಶನಿವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಪಾಲಿಕೆಯ ಪೌರಕಾರ್ಮಿಕರು ಎಂದಿನಂತೆ ಉದ್ಯಮಬಾಗದ ರಸ್ತೆಯ ಬದಿಯಲ್ಲಿ ಸಂಗ್ರಹವಾದ ಕಸವನ್ನು ವಿಂಗಡಿಸುತ್ತಿದ್ದಾಗ, ಈ ಜೀವಂತ ಗುಂಡುಗಳು ಪತ್ತೆಯಾಗಿವೆ.  ಉದ್ಯಮಬಾಗ ಪೊಲೀಸರು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರುಮ

ಸದ್ಯ ಘಟನಾ ಸ್ಥಳದಕ್ಕೆ ಭೇಟಿ ನೀಡಿದ ಪಿಎಸ್ಐ ಪ್ರವೀಣ ಬಿರಾದ ನೇತೃತ್ವದಲ್ಲಿ  ಮಹಜರು ನಡೆಸಲಾಗಿದೆ. ವಶಪಡಿಸಿಕೊಳ್ಳಲಾದ ಒಟ್ಟು 59 ಗುಂಡುಗಳಲ್ಲಿ, 41 ಒಂದು ಮಾದರಿ ಮತ್ತು 18 ಮತ್ತೊಂದು ಮಾದರಿಯ ಗುಂಡುಗಳಾಗಿವೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ