Breaking News

ಭೀಕರ ಸರಣಿ ಅಪಘಾತಕ್ಕೆ 7 ಬಲಿ

Spread the love

ಬೆಂಗಳೂರು: ಹೊರವಲಯ ಹೊಸಕೋಟೆ ಬಳಿ ಬೆಳ್ಳಂ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿದೆ. ಕ್ಯಾಂಟರ್, ಬೈಕ್ ಮತ್ತು ಕಾರಿನ ನಡುವಿನ ಸರಣಿ ಅಪಘಾತಕ್ಕೆ 7 ಜನ ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಒಂದೇ ಕಾರಿನಲ್ಲಿದ್ದ ಆರು ಜನ ಹಾಗೂ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಹೊಸಕೋಟೆಯಿಂದ ದೇವನಹಳ್ಳಿ ಕಡೆ ಅತಿವೇಗವಾಗಿ ಬರ್ತಿದ್ದ ಎಕ್ಸ್ಯುವಿ ಕಾರು, ಬೈಕ್‌ಗೆ ಡಿಕ್ಕಿಯಾಗಿ ನಂತರ ಡಿವೈಡರ್‌ಗೆ ಗುದ್ದಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ 26 ವರ್ಷದ ಗಗನ್ ಹಾಗೂ ಕಾರಿನಲ್ಲಿದ್ದವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಅಶ್ವಿನ್, ಅಯಾನ್ ಅಲಿ, ಭರತ್, ಅರ್ಹಾನ್, ಇತನ್ ಜಾರ್ಜ್ ಎಂದು ಗುರುತಿಸಲಾಗಿದೆ. ಆರ್ ವಿ ಹಾಗೂ ಸಿಎಮ್ ಆರ್ ಕಾಲೇಜು ವಿದ್ಯಾರ್ಥಿಗಳು ಎಂದು ಹೇಳಲಾಗ್ತಿದೆ. ಎಲ್ಲರು ಕೊತ್ತನೂರಿನ ನಿವಾಸಿಗಳಾಗಿದ್ದಾರೆ. ಘಟನೆ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


Spread the love

About Laxminews 24x7

Check Also

ಹಳ್ಳಿಗಳಿಗೂ ಗ್ಯಾಸ್‌ ತಂದ್ರು, ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು: ಕೇಂದ್ರಕ್ಕೆ ಡಿಕೆಶಿ ಪ್ರಶ್ನೆ

Spread the loveಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಅಂತ ಎಲ್ಲಾ ಕಡೆ ಗ್ಯಾಸ್ (Gas) ತಂದ್ರು. ಹಳ್ಳಿಗಳಲ್ಲೂ ಗ್ಯಾಸ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ