Breaking News

 ಜಿಲ್ಲೆಯಲ್ಲಿ ಶೇ.75ರಷ್ಟು ಮತದಾರರ ಪಟ್ಟಿ ಮ್ಯಾಪಿಂಗ್ ಪೂರ್ಣ

Spread the love

ಮತದಾರರ ಪಟ್ಟಿಯ ವಿಶೇಷ   ಪರಿಷ್ಮರಣೆಯ ಪೂರ್ವಸಿದ್ಧತೆ ಭಾಗವಾಗಿ 2022ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಪ್ರಕ್ರಿಯೇ ಪ್ರಗತಿ ಹಂತದಲ್ಲಿದ್ದು, ಜಿಲ್ಲೆಯಲ್ಲಿ ಶೇ.75ರಷ್ಟು ಪೂರ್ಣಗೊಂಡಿದ್ದು, ವಾರದಲ್ಲಿ ಮ್ಯಾಪಿಂಗ್ ಕಾರ್ಯ ಪೂರ್ಣಗೊಳ್ಳಲಿದೆ. ಮುಂದಿನ ಭಾನುವಾರ ಸಭೆ ಕರೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಡಿದ ಅವರು,  ಮತದಾರರ ಪಟ್ಟಿ ಮ್ಯಾಪಿಂಗ್ ಬೇಗ ಪೂರ್ಣಗೊಳಿಸಿ ಚುನಾವಣೆ ಆಯೋಗ ಸಲ್ಲಿಸಬೇಕು. ಅರ್ಹರನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಸೂಚಿಸಲಾಗಿದೆ. ಮ್ಯಾಪಿಂಗ್ ಸಮಸ್ಯೆ ಪರಿಹರಿಸಲು ಪ್ರತ್ಯೇಕ ಅಧಿಕಾರಿಗಳ  ತಂಡ ರಚಿಸಲಾಗಿದೆ ಎಂದರು,
ಬೆಳಗಾವಿ ನಗರ ಆಯ್ಕೆ ಯಾಗಿರುವ  ಸಿಟೀಸ್-2 ಯೋಜನೆಗೆ ರಾಜ್ಯ ಸರ್ಕಾರ, ಮಹಾನಗರ ಪಾಲಿಕೆ ಅನುದಾನ ಪಾವತಿ ಕುರಿತು ಪಾಲಿಕೆ, ಸ್ಮಾರ್ಟ್ ಸಿಟಿ ಅಧಿಕಾರಿಗಳ ಸಭೆ ಕರೆದು ಮಾಹಿತಿ ಪಡೆದುಕೊಳ್ಳಲಾಗುವುದು. ಈ ಸಮಸ್ಯೆ ಇತ್ಯರ್ಥ ಪಡಿಸಲು ಕ್ರಮ ವಹಿಸಲಾಗುವುದು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ