ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.
ನಂತರ ಪೊಲೀಸರಿಂದ ವಂದನಾ ಗೌರವ ಸ್ವೀಕರಿಸಿ, ಪರೇಡ್ ವೀಕ್ಷಿಸಿದ ರಾಜ್ಯಪಾಲರು ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ಗಣರಾಜ್ಯೋತ್ಸವ ಹಿನ್ನೆಲೆ ಮಾಣೆಕ್ ಷಾ ಪರೇಡ್ ಮೈದಾನ ಸುತ್ತಮುತ್ತ ಸೇರಿದಂತೆ, ನಗರದಾದ್ಯಂತ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದು, ಸಾರ್ವಜನಿಕರಿಗಾಗಿ ಆನ್ಲೈನ್ ಮೂಲಕ 2,000 ಇ-ಪಾಸ್ ವ್ಯವಸ್ಥೆ ಮಾಡಲಾಗಿದೆ.
ಇನ್ನೂ ಪರೇಡ್ನಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸೇರಿ 516 ಜನ ಭಾಗಿಯಾಗಿದ್ದರು. ಅಲ್ಲದೇ ಭದ್ರತೆ ಸೇರಿ 2 ಸಾವಿರ ಪೊಲೀಸರು ಪಾಲ್ಗೊಂಡಿದ್ದರು.
Laxmi News 24×7