Breaking News

ಕಪ್ಪೆ ಚಿಪ್ಪಿಗಾಗಿ ಸಾಗರಕ್ಕಿಳಿದ 8 ಮಂದಿ ಸಾವು; 5 ಲಕ್ಷ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

Spread the love

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಪ್ಪೆ ಚಿಪ್ಪುಗಳ ತರಲು ಸಮುದ್ರಕ್ಕೆ ಇಳಿದಿದ್ದ ಒಂದೇ ಕುಟುಂಬದ 08 ಮಂದಿ ಸಾವನ್ನಪ್ಪಿದ ಧಾರುಣ ಘಟನೆ ತಟ್ಟೆಹಕ್ಕಲು ಕಡಲ ತೀರದಲ್ಲಿ ಜರುಗಿದೆ. ಸಾಗರ ಅಲೆಗೆ ಕೊಚ್ಚಿ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನುಳಿದವರಿಗಾಗಿ ಹುಟುಕಾಟ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಸಮುದ್ರ ಮಟ್ಟದಲ್ಲಿ ನಿರಂತರ ಬಿರುಗಾಳಿ, ಹವಾಮಾನ ಬದಲಾವಣೆಗಳು ಸಂಭವಿಸುತ್ತಿದ್ದು, ಈ ಬಗ್ಗೆ ಐಎಂಡಿ ಹವಾಮಾನ ವರದಿಯಲ್ಲಿ ತಿಳಿಸಿದೆ. ಇದರ ನಡುವೆ ಭಟ್ಕಳದ ತಟ್ಟೆಹಕ್ಕಲು ಕಡಲ ತೀರಕ್ಕೆ ಒಟ್ಟು 12 ಮಂದಿ ಕಪ್ಪೆ ಚಿಪ್ಪುಗಳನ್ನು (ಚಿಪ್ಪಿಕಲ್ಲು) ತರಲು ಹೋಗಿದ್ದಾರೆ. ಈ ವೇಳೆ ಅಲೆಗಳ ರಭಸಕ್ಕೆ ಸಿಲುಕಿ ಕೊಚ್ಚಿಹೋಗಿದ್ದು, 8 ಮಂದಿ ಜೀವ ಬಿಟ್ಟಿದ್ದಾರೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದ ಇಬ್ಬರಿಗಾಗಿ ಶೋಧ ಕಾರ್ಯ ನಡೆದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಭಟ್ಕಳ ದುರಂತ ಕುರಿತು ಭಾನುವಾರ ಎಕ್ಸ್‌ ಪೋಸ್ಟ್ ಮಾಡಿರುವ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ‘ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಈ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಂತಾಪ ತಿಳಿಸಿದ್ದಾರೆ.

5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ

‘ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು” ಎಂದು ಅವರು ಇದೇ ವೇಳೆ ಘೋಷಿಸಿದರು. ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿ ಲಭ್ಯವಾಗಿದೆ. ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿ ಬಂದು ತಮ್ಮವರನ್ನು ಕೂಡಿಕೊಳ್ಳಲಿ‌ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ’ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪ

Spread the loveಬೆಂಗಳೂರು: ಬಿಪಿಎಲ್  ಕಾರ್ಡ್‌ಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು 3 ಲಕ್ಷ ರೂ.ವರೆಗೆ ಹೆಚ್ಚಿಸುವ ಬಗ್ಗೆ ಸರ್ಕಾರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ