Breaking News

ಬಾಯಲ್ಲೇ 82 ಗ್ರಾಂ ಚಿನ್ನದ ಕ್ಯಾಪ್ಸೂಲ್‌; ಬೆಂಗಳೂರಲ್ಲಿ ಸಿಕ್ಕಿಬಿದ್ದ ದುಬೈ ಪ್ರಯಾಣಿಕ

Spread the love

ಬೆಂಗಳೂರು: ಚಿನ್ನವನ್ನು (Gold Theft) ಅಕ್ರಮವಾಗಿ ಸಾಗಿಸಲು ಪ್ರಯಾಣಿಕನೊಬ್ಬ ವಿಚಿತ್ರ ಮಾರ್ಗ ಅನುಸರಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಬಾಯಿಯಲ್ಲಿ ಬರೋಬ್ಬರಿ 82 ಗ್ರಾಂ (Gold Capsule) ಚಿನ್ನ ಪತ್ತೆಯಾಗಿದೆ.

ಮಹಮ್ಮದ್ ಸಿರಾಜ್ ಎಂಬ ಪ್ರಯಾಣಿಕ ದುಬೈನಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದಿಳಿದಿದ್ದ. ಬಳಿಕ ಬೆಂಗಳೂರಿನಿಂದ ಗಾಜಿಯಾಬಾದ್‌ಗೆ ತೆರಳಲು ಸಿದ್ಧವಾಗಿದ್ದ. ಈ ವೇಳೆ ಏರ್‌ಪೋರ್ಟ್‌ನಲ್ಲಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ  ಸಿಬ್ಬಂದಿಗೆ ಆತನ ವರ್ತನೆ ಅನುಮಾನ ಮೂಡಿಸಿದೆ.

ಸಿಬ್ಬಂದಿ ಆತನನ್ನು ಪರಿಶೀಲಿಸಿದರೂ ಮೊದಲಿಗೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿರಲಿಲ್ಲ. ಬಳಿಕ ಆತನ ಬಾಯಿಯನ್ನು ಪರಿಶೀಲಿಸಿದಾಗ ಎರಡು ಚಿನ್ನದ ಕ್ಯಾಪ್ಸೂಲ್‌ಗಳು ಪತ್ತೆಯಾಗಿವೆ. ಅವುಗಳಲ್ಲಿ ಒಟ್ಟು 82 ಗ್ರಾಂ ಚಿನ್ನ ಇತ್ತು ಎನ್ನಲಾಗಿದೆ.

ಬಾಡಿ ಸ್ಕ್ಯಾನರ್‌ನಿಂದ ಚಿನ್ನ ಪತ್ತೆಯಾಗದಂತೆ ಮಾಡಲು ಬಾಯಿಯಲ್ಲಿ ಚಿನ್ನದ ಕ್ಯಾಪ್ಸೂಲ್‌ಗಳನ್ನು ಇಟ್ಟುಕೊಂಡು ಬಂದಿದ್ದ ಎನ್ನಲಾಗಿದೆ. ಆದರೆ CISF ಸಿಬ್ಬಂದಿಯ ಅನುಮಾನದಿಂದಾಗಿ ಕೊನೆಗೂ ಆತನ ಕೃತ್ಯ ಬಯಲಾಗಿದೆ.

ಸದ್ಯ ಮಹಮ್ಮದ್ ಸಿರಾಜ್‌ನನ್ನು ಹೆಚ್ಚಿನ ತನಿಖೆಗಾಗಿ KIA ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಚಿನ್ನ ಎಲ್ಲಿಂದ ಬಂದಿತ್ತು, ಯಾರಿಗೆ ತಲುಪಿಸಬೇಕಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ