Breaking News

ಬೆಂಗಳೂರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಕೋಟಿ ಹಣ ಸೀಜ್‌

Spread the love

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 9 ಕೋಟಿ ರೂ. ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು  ವಶಕ್ಕೆ ಪಡೆದಿದ್ದಾರೆ.

ಹಣ ಸಾಗಾಟದ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳು ಪೊಲೀಸರಿಗೆ ಖಚಿತ ಮಾಹಿತಿ ನೀಡಿದ್ದರು. ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ವಾಹನವನ್ನು ಪೊಲೀಸರು ಅಡ್ಡಗಟ್ಟಿ ಪರಿಶೀಲನೆ ನಡೆಸಿದಾಗ ಹಣ ಪತ್ತೆಯಾಗಿದೆ.

ತಮಿಳುನಾಡಿನ ತೂತುಕುಡಿಯ ಸಿಂಧೂ ಜ್ಯೂವೆಲರ್ಸ್ ಮಾಲೀಕ ಸಚಿನ್ ಎಂಬಾತನಿಗೆ ಸೇರಿದ ಹಣ ಎನ್ನಲಾಗಿದೆ. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಹಣ ಮತ್ತು ಸಚಿನ್ ಎಂಬಾತನನ್ನು ಆದಾಯ ತೆರಿಗೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಐಟಿ ಅಧಿಕಾರಿಗಳು, ಸಚಿನ್‌ ಮನೆಯನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 1.3 ಕೋಟಿ ನಗದು ಪತ್ತೆಯಾಗಿದೆ. ಹಣ ಯಾರಿಗೆ ಸೇರಿದ್ದು ಎನ್ನುವ ಬಗ್ಗೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ