Breaking News

ಬೆಂಗಳೂರಿನಲ್ಲಿ 911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ – ಗೃಹ ಇಲಾಖೆ ಅಂಕಿಅಂಶ ಬಿಡುಗಡೆ

Spread the love

ಬೆಂಗಳೂರು: ನಗರದಲ್ಲಿ ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು ಸರ್ಕಾರ ಒಪ್ಪಿಕೊಂಡಿದೆ. ವಿಧಾನ ಪರಿಷತ್ ‌ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಗೋಪಿನಾಥ್ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಇಲಾಖೆ ಸಚಿವರು ಉತ್ತರ ನೀಡಿದ್ದಾರೆ.

ಅಕ್ರಮ ವಲಸಿಗ ನುಸುಳುಕೋರರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರೋ ಸ್ಪೋಟಕ ಮಾಹಿತಿಯನ್ನು ನೀಡಿದೆ. ಬೆಂಗಳೂರಿನಲ್ಲಿ ವೀಸಾ, ಪಾಸ್‌ಪೋರ್ಟ್ ಅವಧಿ ಇರುವ ವಿದೇಶಿಗರು 5304 ಜನ ಇದ್ದಾರೆ. ವೀಸಾ, ಪಾಸ್‌ಪೋರ್ಟ್ ಅವಧಿ ಮೀರಿದ್ದರೂ ಅಕ್ರಮವಾಗಿ 446 ವಿದೇಶಿಗರು ಇದ್ದಾರೆ. 3 ವರ್ಷಗಳಲ್ಲಿ ದೇಶದೊಳಗೆ ಅಕ್ರಮವಾಗಿ ನುಸುಳಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿಗರ ಮಾಹಿತಿ ಇಲ್ಲ. ಆದರೆ 3 ವರ್ಷಗಳಲ್ಲಿ 911 ಜನ ಅಕ್ರಮ ವಲಸಿಗರನ್ನು ಇಲಾಖೆ ಗುರುತಿಸಿದೆ

ಇದರಲ್ಲಿ ಬಾಂಗ್ಲಾದೇಶ 868, ಪಾಕಿಸ್ತಾನ 20, ನೈಜೀರಿಯಾ 13, ಶ್ರೀಲಂಕಾ 8, ಮಯನ್ಮಾರ್ 01, ಉಗಾಂಡಾದವರು ಒಬ್ಬರು ಇದ್ದಾರೆ. 31 ದೇಶದ 365 ವಿದೇಶಿಗರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರೋ ಮಾಹಿತಿಯನ್ನು ಗೃಹ ಇಲಾಖೆ ನೀಡಿದೆ.


Spread the love

About Laxminews 24x7

Check Also

ಪ್ಯಾಕ್‌ ಮಾಡದ ಖಾದ್ಯ ತೈಲ ಮಾರಾಟಕ್ಕೆ ನಿಷೇಧ – ನಿಯಮ ಉಲ್ಲಂಘಿಸಿದ್ರೆ 7 ವರ್ಷ ಜೈಲು

Spread the loveಮುಂಬೈ: ಮಹಾರಾಷ್ಟ್ರದಲ್ಲಿ ಸಡಿಲ (ಪ್ಯಾಕ್ ಮಾಡದ) ಖಾದ್ಯ ತೈಲ ಮಾರಾಟ ಮಾಡುವುದನ್ನು ರಾಜ್ಯ ಆಹಾರ ಮತ್ತು ಔಷಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ