Breaking News

ವಿದ್ಯುತ್ ಬಿಗ್​ ಕಟ್ಟಲು ನಿರಾಕರಿಸಿದ ಗ್ರಾಮಸ್ಥರು

Spread the love

ಚಿತ್ರದುರ್ಗ: ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ(Karnataka Assembly Elections 2023) ಗೆಲ್ಲಲೇಬೇಕೆಂದು ಕಾಂಗ್ರೆಸ್ ಹಲವು ಗ್ಯಾರಂಟಿಗಳು ಘೋಷಿಸಿದೆ.

ಇದರಲ್ಲಿ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ (Free Electricity) ಪೂರೈಕೆಯೂ ಒಂದಾಗಿದ್ದು, ಜೂನ್ 1ರಿಂದ ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಘಂಟಾಘೋಷವಾಗಿ ಹೇಳಿದ್ದರು. ಅದರಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುತದೊಂದಿಗೆ ಅಧಿಕಾರಕ್ಕೆ ಬಂದಿದೆ.

ಆದ್ರೆ, ಸಿಎಂ ಯಾರು ಎನ್ನುವುದು ಕಗ್ಗಂಟಾಗಿದೆ. ನೂತನ ಮುಖ್ಯಮಂತ್ರಿ ಪ್ರಮಾಣ ವಚನಸ್ವೀಕರಿಸಿದ ಬಳಿಕ ಮೊದಲ ಸಚಿವ ಸಂಪುಟದಲ್ಲೇ ಗ್ಯಾರಂಟಿಗಳನ್ನು ಅಧಿಕೃತವಾಗಿ ಜಾರಿಗೊಳಿಸಲು ಕಾಂಗ್ರೆಸ್​ ಮುಂದಾಗಿದೆ.

ಅದರಕ್ಕೂ ಮೊದಲೇ ಈ ಹಳ್ಳಿಯಲ್ಲಿ ಗ್ರಾಮಸ್ಥರು ವಿದ್ಯುತ್ ಬಿಗ್​ ಕಟ್ಟಲು ನಿರಾಕರಿಸಿದ್ದಾರೆ. ಹೌದು…ಚಿತ್ರದುರ್ಗದ ಜಾಲಿಕಟ್ಟೆಯಲ್ಲಿ ವಿದ್ಯುತ್ ಬಿಲ್ ಪಾವತಿಸಲು ಜನರು ನಿರಾಕರಿಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ನಾವು ಬಿಲ್ ಕಟ್ಟಲ್ಲ ಎಂದು ಬೆಸ್ಕಾಂ ಮೀಟರ್ ರೀಡರ್ ಗೆ ಗ್ರಾಮಸ್ಥರು ಆವಾಜ್ ಹಾಕಿದ್ದಾರೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ