Breaking News

ಉಚಿತವಾಗಿ ಹಂಚುವ ರೇಷನ್ ಕಿಟ್‍ಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರ ಸೆರೆ

Spread the love

ಬೆಂಗಳೂರು, – ಕಾರ್ಮಿಕ ಇಲಾಖೆಯಿಂದ ಬಡವರಿಗೆ ಉಚಿತವಾಗಿ ಹಂಚುವ ರೇಷನ್ ಕಿಟ್‍ಗಳನ್ನು ಹಣಕ್ಕೆ ಮಾರಾಟ ಮಾಡುತ್ತಿದ್ದ ನಾಲ್ವರು ಆರ್‍ಟಿ ನಗರ ಪೊಲೀಸರ ಅತಿಥಿಗಳಾಗಿದ್ದಾರೆ.

ಕಾರ್ಮಿಕ ಇಲಾಖೆಯ ರೇಷನ್‍ಕಿಟ್‍ಗಳನ್ನು ತಲಾ ಒಂದು ಕಿಟ್‍ಗೆ 150ರೂ. ಪಡೆದು ಕೆಲವರು ಮಾರಾಟ ಮಾಡುತ್ತಿದ್ದರು. ಆದರೆ, ಈ ಬಗ್ಗೆ ಸ್ಥಳೀಯ ಶಾಸಕರು ಹಾಗೂ ಪಾಲಿಕೆ ಸದಸ್ಯರಿಗೆ ಮಾಹಿತಿ ಇರಲಿಲ್ಲ.

ಆರ್‍ಟಿ ನಗರದಲ್ಲಿ ಮೆಟೆಡೋರ್‍ನಲ್ಲಿ ಕಾರ್ಮಿಕ ಇಲಾಖೆಯ ಕಿಟ್‍ಗಳನ್ನು ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಮಾಹಿತಿಯನ್ನಾಧರಿಸಿ ನಾಲ್ವರನ್ನು ಬಂಧಿಸಿ ಎರಡು ಟ್ರಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.

ಬಡವರ ಕಿಟ್‍ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಬಗ್ಗೆ ಇಲಾಖೆಯಿಂದ ಆಂತರಿಕ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಭರವಸೆ ನೀಡಿರುವುದರಿಂದ ಆರೋಪಿಗಳನ್ನು ಇಲಾಖೆ ಅಧಿಕಾರಿಗಳೊಂದಿಗೆ ಕಳುಹಿಸಲಾಗಿದೆ ಎಂದು ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ