Breaking News

R.S.S. ಕಚೇರಿಗೆ ಭೇಟಿ ಮಹತ್ವದ ಚರ್ಚೆ ನಡೆಸಿದ ಬೊಮ್ಮಾಯಿ

Spread the love

ಬೆಂಗಳೂರು: ಚುನಾವಣೆಯ ಫಲಿತಾಂಶದ ಬಳಿಕ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಆರ್ ಎಸ್ ಎಸ್ ನಾಯಕರೊಂದಿಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.

ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವ ಕೃಪಕ್ಕೆ ಭೇಟಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇಂದು ಆರ್ ಎಸ್ ಎಸ್ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ಮಾಡಿದ್ದೇವೆ. ಬರುವಂತಹ ದಿನಗಳಲ್ಲಿ ಪಕ್ಷವನ್ನು ಮುಂದೆ ಹೇಗೆ ಸಂಘಟಿಸಬೇಕು ಎಂಬುದರ ಬಗ್ಗೆ ಚರ್ಚೆ ಆಗಿದೆ.‌

ರಾಜ್ಯಾಧಕ್ಷರು, ವರಿಷ್ಠರ ಜೊತೆಗೆ ಹಲವಾರು ಬಾರಿ ಚರ್ಚಿಸಿ ಭಾರತೀಯ ಜನತಾ ಪಕ್ಷವನ್ನು ಹೇಗೆ ಸಂಘಟನೆ ಮಾಡಬೇಕು ಎನ್ನುವ ತೀರ್ಮಾನ ಮಾಡುತ್ತೇವೆ ಎಂದರು.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರ ಸಭೆಯನ್ನು ಕರೆದಿಲ್ಲ. ಶಾಸಕರ ಸಭೆಯನ್ನು ರಾಜ್ಯಾಧಕ್ಷರು ಕರೆಯಲಿದ್ದಾರೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ