Breaking News

ಹರಿಹರ: ಆಸ್ತಿ ವಿಚಾರದ ಗಲಾಟೆ; ಅಣ್ಣನನ್ನು ಇರಿದು ಕೊಂದ ತಮ್ಮ

Spread the love

ದಾವಣಗೆರೆ: ಆಸ್ತಿ ವಿಚಾರವಾಗಿ ಅಣ್ಣನನ್ನು ತಮ್ಮ ಚಾಕುನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಹರಿಹರದಲ್ಲಿ ಭಾನುವಾರ ರಾತ್ರಿ ನಡೆದಿದೆ

ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ (31) ಕೊಲೆಯಾದ ವ್ಯಕ್ತಿ. ಹರಿಹರದ ಗುಂಡಪ್ಪ ಎಂಬುವರಿಗೆ ಇಬ್ಬರು ಪತ್ನಿಯರಿದ್ದು ನಗರದ ಭರಂಪುರ ನಿವಾಸಿ ಎರಡನೇ ಪತ್ನಿ ರತ್ನಮ್ಮನ ಪುತ್ರ ರಾಜು ಹಾಗೂ ಮೊದಲನೇ ಪತ್ನಿ ಲಕ್ಷಮ್ಮ ಕೊನೆಯ ಮಗನಾದ ಕುಮಾರ್ ನಡುವೆ ಆಸ್ತಿ ವಿಚಾರದಲ್ಲಿ ನ್ಯಾಯಾಲಯದಲ್ಲಿ ದಾವೆ ನಡೆಯುತ್ತಿತ್ತು.

 

ಇವರಿಬ್ಬರ ಮಧ್ಯೆ ಮನಸ್ತಾಪವಿದ್ದು ಪದೇ ಪದೇ ಸಣ್ಣಪುಟ್ಟ ಜಗಳ ನಡೆಯುತ್ತಿದ್ದು ಭಾನುವಾರ ರಾತ್ರಿ ದಾವಣಗೆರೆಯಿಂದ ಹರಿಹರಕ್ಕೆ ವಾಪಸ್ ಬರುತ್ತಿರುವ ಮಾರ್ಗ ಮಧ್ಯೆ ಕುಮಾರ್ ಮೇಲೆ ತಮ್ಮ ರಾಜು ಮತ್ತು ಮಾರುತಿ ಎಂಬುವವರು ಹಲ್ಲೆ ಮಾಡಿದ್ದಾರೆ. ಕೂಡಲೇ ಕುಮಾರ್ ನನ್ನು ಹರಿಹರ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಆಸ್ಪತ್ರೆಯಲ್ಲಿಯೇ ಕುಮಾರ್ ಮೇಲೆ ರಾಜು ಹಲ್ಲೆ ನಡೆಸಿ ಚಾಕುವಿನಿಂದ ತಿವಿದಿದ್ದಾರೆ. ತೀವ್ರವಾಗಿ ರಕ್ತಸಾವ್ರಗೊಂಡ ಕುಮಾರ್ ಅವರನ್ನು ದಾವಣಗೆರೆಗೆ ಕರೆತರುವಾಗ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

Spread the love ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ