ಶಿವಮೊಗ್ಗ: ಯುವತಿಯೊಬ್ಬಳನ್ನು ಅಪಹರಿಸಿರುವ ದುಷ್ಕರ್ಮಿಗಳು ಹಣಕಾಗಿ ಬೇಡಿಕೆ ಇರಿಸಿದ್ದು ಈ ಸಂಬಂಧ ದೂರು ದಾಖಲಾಗಿದೆ.
ಚನ್ನಗಿರಿ ತಾಲೂಕು ನಲ್ಲೂರು ಗ್ರಾಮದ ಯುವತಿ ಅಪಹರಣಕ್ಕೊಳಗಾದವಳು. ಈಕೆ ಉನ್ನತ ವ್ಯಾಸಂಗ ಮಾಡುತ್ತಿದ್ದು ಈಕೆಯನ್ನು ದುಷ್ಕರ್ಮಿಗಳು ಅಪಹರಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಅಪಹರಣಕಾರರು ಯುವತಿಯ ದೂರವಾಣಿ ಸಂಖ್ಯೆಯಿಂದಲೇ ಕುಟುಂಬಸ್ಥರಿಗೆ ಹಾಗೂ ಸ್ನೇಹಿತರಿಗೆ ಕರೆ ಮಾಡಿ 20 ಲಕ್ಷ ರೂಪಾಯಿ ನೀಡಿದರೆ ಮಾತ್ರ ಆಕೆಯನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ಪೋಷಕರು ದೂರು ದಾಖಲಿಸಿದ್ದಾರೆ.
Laxmi News 24×7