Breaking News

ಸಿದ್ದರಾಮಯ್ಯನವರೇ ನೂರಕ್ಕೆ ನೂರರಷ್ಟು ಮುಖ್ಯಮಂತ್ರಿ: ಕೆ.ಎನ್.ರಾಜಣ್ಣ

Spread the love

ತುಮಕೂರು: ಮಾಜಿ ಸಿಎಂ ಸಿದ್ದರಾಮಯ್ಯನವರೇ ನೂರಕ್ಕೆ ನೂರರಷ್ಟು ಮುಖ್ಯಮಂತ್ರಿ ಆಗ್ತಾರೆ ಎಂದು ಶಾಸಕ ಕೆ.ಎನ್.ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ತಾರೆ. ಮೇ 18ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಹೈಕಮಾಂಡ್ ಒಲವು ಕೂಡ ಸಿದ್ದರಾಮಯ್ಯ ಪರವಾಗಿಯೇ ಇದೆ. ಇದಕ್ಕೆ ಡಿ.ಕೆ.ಶಿವಕುಮಾರ್ ಕೂಡ ಸಹಕಾರ ಕೊಡುತ್ತಾರೆ ಎಂದರು.

ನೂತನ ಸಿಎಂ ವಿಚಾರ ಇಂದು ಫೈನಲ್ ಆಗಲೇಬೇಕು. ಸಧ್ಯಕ್ಕೆ ಸಿದ್ದರಾಮಯ್ಯ ಒಬ್ಬರೇ ಪ್ರಮಾಣವಚನ ಸ್ವೀಕರಿಸಬಹುದು. ಸಚಿವ ಸಂಪುಟ ಸ್ವಲ್ಪ ತಡವಾಗಬಹುದು. ಇನ್ನು ಮೊದಲ ಸಂಪುಟದಲ್ಲೇ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ ಎಂದರು.

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ನಾನು ಸಚಿವನಾಗುತ್ತೇನೆ, ಸಹಕಾರ ಖಾತೆ ನೀಡಬೇಕು ಎಂಬುದು ನನ್ನ ಆಶಯ ಎಂದು ಇದೇ ವೇಳೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಸ್ವಾತಂತ್ರ್ಯ ಹೋರಾಟಗಾರರ ತಿಂಗಳ ಗೌರವಧನ ₹4.85 ಕೋಟಿ ಬಾಕಿ ಉಳಿಸಿಕೊಂಡ ರಾಜ್ಯ ಸರ್ಕಾರ

Spread the loveಬೆಂಗಳೂರು: ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಪಡೆದುಕೊಳ್ಳಲು ಹೋರಾಡಿ ಜೈಲು ಶಿಕ್ಷೆ ಅನುಭವಿಸಿದ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಲಾಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ