Breaking News

Social Media ಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌: ಮಂಗಳೂರು ಪೊಲೀಸ್‌ ಆಯುಕ್ತರಿಂದ ಎಚ್ಚರಿಕೆ

Spread the love

ಮಂಗಳೂರು: ವಿಧಾನಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿರುವುದು ಕಂಡು ಬಂದಿದ್ದು ಇಂತಹ ಪೋಸ್ಟ್‌ಗಳನ್ನು ಹಾಕುವ ಅಥವಾ ಫಾರ್ವರ್ಡ್‌ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌.

ಜೈನ್‌ ಎಚ್ಚರಿಕೆ ನೀಡಿದ್ದಾರೆ.

ಜಾತಿ, ಧರ್ಮ ಮತ್ತು ಪ್ರದೇಶ ಆಧಾರಿತವಾಗಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವಂತಹ ಮತ್ತು ವೈಯಕ್ತಿಕ ನಿಂದನೆ ಮಾಡುವಂತಹ ದ್ವೇಷಪೂರಿತ ಮತ್ತು ಪ್ರಚೋದನಾತ್ಮಕ ಪೋಸ್ಟ್‌ಗಳ ಮೇಲೆ ನಿಗಾ ಇಡಲು “ಸೋಶಿಯಲ್‌ ಮೀಡಿಯಾ ಮಾನಿಟರಿಂಗ್‌ ಸೆಲ್‌’ ರಚಿಸಲಾಗಿದೆ. ಇಂತಹ ಸಂದೇಶ ಪೋಸ್ಟ್‌ ಮಾಡುವುದು, ಫಾರ್ವರ್ಡ್‌ ಮಾಡುವುದು, ಲೈಕ್‌, ಕಮೆಂಟ್‌ ಮಾಡುವುದು ಅಪರಾಧವಾಗಿದ್ದು ಈ ರೀತಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಯಾವುದೇ ಸುಳ್ಳು ಸುದ್ದಿ ಮತ್ತು ದ್ವೇಷದ ಸಂದೇಶಗಳಿಗೆ ಕಿವಿಗೊಡಬಾರದು ಎಂದು ಪೊಲೀಸ್‌ ಆಯುಕ್ತರು ಮನವಿ ಹೇಳಿದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ