ಶಿರಸಿ: ಉ.ಕ ಜಿಲ್ಲೆಯ ಶಿರಸಿ ತಾಲೂಕಿನ ಹುಲೇಕಲ್ ಪಂಚಾಯತ ವ್ಯಾಪ್ತಿಯ ಅಮಚಿಮನೆ ಗ್ರಾಮದಲ್ಲಿ ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದ ಅಡಿಕೆ ತೋಟ ಹಾಗೂ ಬೆಟ್ಟದ ಮರಗಿಡ ಸಂಪೂರ್ಣ ಸುಟ್ಟು ಹೋಗಿದೆ.
ಭವಾನಿ ಹೆಗಡೆ ಮತ್ತು ಎಮ್.ವಿ.ಹೆಗಡೆಯವರಿಗೆ ಸೇರಿದ ೨ ಎಕರೆ ಮಾಲ್ಕಿ ಬೆಟ್ಟ ಮತ್ತು ಅರ್ಧ ಎಕರೆ ಅಡಿಕೆ ತೋಟಕ್ಕೆ ಬುಧವಾರ ಮಧ್ಯಾಹ್ನ ಬೆಂಕಿ ತಗುಲಿದ್ದು ಕೊಟ್ಯಾಂತರ ರೂ. ಹಾನಿಯಾಗಿದೆ.

ಹಾನಿಯಿಂದ ರೈತ ಕುಟುಂಬ ತೀವ್ರ ಆಘಾತಕ್ಕೊಳಗಾಗಿದೆ. ಹೊಗೆ ಕಾಣಿಸಿಕೊಂಡ ತಕ್ಷಣ ಕಾರ್ಯಪ್ರವೃತ್ತರಾದ ಕುಟುಂಬದ ಸದಸ್ಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ, ಉರಿಯುವ ಬೆಂಕಿಯು ನೋಡ ನೋಡುತ್ತಿದ್ದಂತೆ ಫಸಲು ನೀಡುತ್ತಿದ್ದ ಹಳೆ ತೋಟದಲ್ಲಿ ಹರಡಿ, ತೋಟವನ್ನು ಸುಟ್ಟು ಹಾಕಿದೆ. ಕುಟುಂಬದವರು, ಸ್ಥಳೀಯರು ಅಸಹಾಯಕರಾಗಿ ನಿಲ್ಲುವಂತಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈ ಬಗ್ಗೆ ಇಲಾಖೆ ಸೂಕ್ತ ಪರಿಹಾರ ನೀಡಬೇಕು ಎಂದು ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.
Laxmi News 24×7