Breaking News

ಆಟೊ ರಿಕ್ಷಾಕ್ಕೆ ಲಾರಿ ಡಿಕ್ಕಿ5 ಸಾವು

Spread the love

ಅಮರಾವತಿ: ಆಟೊ ರಿಕ್ಷಾಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು 7 ಜನ ಗಂಭೀರ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ದಾಚೆಪಲ್ಲಿ ಮಂಡಲದಲ್ಲಿ ನಡೆದಿದೆ.

ಆಟೊ ರಿಕ್ಷಾದಲ್ಲಿ 12 ಜನ ಕಾರ್ಮಿಕರು ಪ್ರಯಾಣಿಸುತ್ತಿದ್ದು ಇವರಲ್ಲಿ 5 ಜನ ಸ್ಥಳದಲ್ಲಿ ಅಸು ನೀಗಿದರು. ಗಾಯಗೊಂಡವರನ್ನು ಗುರ್ಜಾಲ, ಮಿರ್ಯಾಲಗೂಡ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇವರೆಲ್ಲ ರಾಮಾಲಯದತ್ತ ಸಾಗುತ್ತಿದ್ದರು ಎನ್ನಲಾಗಿದೆ.

ಈ ವೇಳೆ ಎದುರಿನಿಂದ ವೇಗವಾಗಿ ಬಂದ ಲಾರಿ ನೇರವಾಗಿ ಆಟೊ ರಿಕ್ಷಾಕ್ಕೆ ಡಿಕ್ಕಿ ಹೊಡೆಯಿತು. ಘಟನೆ ಸಂಭವಿಸುತ್ತಲೇ ಲಾರಿ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿರಂತರ: ಮಾತಾ ಗಂಗಾದೇವಿ

Spread the love ದಾವಣಗೆರೆ: ನಮ್ಮ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಿರಂತರವಾಗಿ ಇದ್ದೇ ಇರುತ್ತದೆ ಎಂದು ಬಸವ ಧರ್ಮ ಪೀಠದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ