Breaking News
Microscopic view of Coronavirus, a pathogen that attacks the respiratory tract. Analysis and test, experimentation. Sars. 3d render

ಹಾಸನದಲ್ಲಿ ಮತ್ತೆ ಮೂವರಿಗೆ ಕೊರೊನಾ- ಜಿಲ್ಲೆಯಲ್ಲಿ 12ಕ್ಕೇರಿದ ಸೋಂಕಿತರ ಸಂಖ್ಯೆ

Spread the love

ಹಾಸನ: ಜಿಲ್ಲೆಯಲ್ಲಿ ಇಂದು ತಂದೆ-ಮಗ ಸೇರಿದಂತೆ ಮತ್ತೆ ಮೂವರಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಎಲ್ಲರೂ ಮುಂಬೈನಿಂದ ವಾಪಸ್ ಬಂದವರಾಗಿದ್ದಾರೆ.

ಈ ಹಿಂದೆ ಹಾಸನದಲ್ಲಿ ಒಂಬತ್ತು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಅವರೆಲ್ಲರೂ ಚನ್ನರಾಯಪಟ್ಟಣ ತಾಲೂಕಿನವರಾಗಿದ್ದು, ಮುಂಬೈಯಿಂದ ವಾಪಸ್ಸಾದವರಾಗಿದ್ದರು. ಇಂದು ಮತ್ತೆ ಮೂರು ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಹಾಸನದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ 12ಕ್ಕೆ ಏರಿದೆ.

ಮೂವರಲ್ಲಿ ಇಬ್ಬರು ಚನ್ನರಾಯಪಟ್ಟಣ ಮೂಲದ ತಂದೆ ಮತ್ತು ಮಗನಾಗಿದ್ದು, ಮುಂಬೈನಿಂದ ಸ್ವಂತ ಕಾರಿನಲ್ಲಿ ಆಗಮಿಸಿದ್ದಾರೆ. ಹೀಗಾಗಿ ಅವರ ಜೊತೆ ಸಂಪರ್ಕದಲ್ಲಿದ್ದವರ ಮೇಲೆ ನಿಗಾವಹಿಸಲಾಗಿದೆ. ಮತ್ತೊಬ್ಬರು ಮಹಿಳೆ ಅರಕಲಗೂಡು ಮೂಲದವರಾಗಿದ್ದು ಅವರ ಜೊತೆ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಮುಂಬೈನಿಂದ ಬಂದವರೆಲ್ಲರನ್ನೂ ನೇರವಾಗಿ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಅರಕಲಗೂಡಿನ ಮಹಿಳೆ ಮೇ12 ರಂದು ಮುಂಬೈನಿಂದ ಬಸ್ಸಿನಲ್ಲಿ ಬಂದಿದ್ದರು. ಒಟ್ಟು 20 ಜನ ಮಹಿಳೆಯೊಂದಿಗೆ ಬಸ್ಸಿನಲ್ಲಿ ಪ್ರಯಾಣ ಮಾಡಿದ್ದರು. ಅದರಲ್ಲಿ 17 ಜನ ಚನ್ನರಾಯಪಟ್ಟಣ ಮೂಲದವರಾಗಿದ್ದಾರೆ. ಇನ್ನುಳಿದ ಮೂವರು ಅರಕಲಗೂಡಿನವರಾಗಿದ್ದಾರೆ. ಎಲ್ಲರನ್ನೂ ಮುಂಬೈನಿಂದ ಬಂದ ತಕ್ಷಣ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಮಹಿಳೆಯ ಟ್ರಾವೆಲ್ ಹಿಸ್ಟರಿಯಿಂದ ಕೊರೊನಾ ಸೋಂಕು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.


Spread the love

About Laxminews 24x7

Check Also

ಮಾಜಿ ಪ್ರಿಯಕರನಿಗೆ ಚಾಕು ಇರಿತ; ಮನುಕುಮಾರ್ ಅಂದರ್

Spread the loveಹಾಸನ : ಮಾಜಿ ಪ್ರಿಯಕರನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಮನುಕುಮಾರ್ ಪ್ರಿಯತಮನನ್ನುಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ