Breaking News

ಡಿಕೆಶಿ ಅಕ್ರಮ ಆಸ್ತಿ ವಿಚಾರಣೆ ಜುಲೈ 14ಕ್ಕೆ ಮುಂದೂಡಿಕೆ

Spread the love

ಹೊಸದಿಲ್ಲಿ: ಡಿ.ಕೆ.ಶಿವಕುಮಾರ್‌ ಅಕ್ರಮ ಆಸ್ತಿಗಳ ತನಿಖೆ ಮುಂದುವರಿಸಲು ಅವಕಾಶ ನೀಡಬೇಕೆಂದು ಸಿಬಿಐ ಸರ್ವೋಚ್ಚ ಪೀಠದಲ್ಲಿ ಸಲ್ಲಿರುವ ಅರ್ಜಿ ವಿಚಾರಣೆ ಜು.14ಕ್ಕೆ ಮುಂದೂಡಲ್ಪಟ್ಟಿದೆ. ಮೇ 23ಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಯಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ಅಕ್ರಮ ಆಸ್ತಿ ಹೊಂದಿದ್ದಾರೆ, ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಪ್ರಕರಣಗಳನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ. ಶಿವಕುಮಾರ್‌ ಮನವಿಯಂತೆ ಫೆ.10ರಂದು ಉಚ್ಚ ನ್ಯಾಯಾಲಯ ವಿಚಾರಣೆಗೆ ತಡೆ ನೀಡಿತ್ತು. ಇದರ ವಿರುದ್ಧ ಸಿಬಿಐ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿತ್ತು. ಆದಾಯ ತೆರಿಗೆ ಇಲಾಖೆ 2017ರಂದು ಶಿವಕುಮಾರ್‌ ನಿವಾಸದ ಮೇಲೆ ದಾಳಿ ನಡೆಸಿತ್ತು. ಅದರ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ವಿಚಾರಣೆ ಆರಂಭಿಸಿತ್ತು. ಇದಾದ ಬಳಿಕ ಪ್ರಕರಣದಲ್ಲಿ ಪ್ರವೇಶ ಪಡೆದ ಕರ್ನಾಟಕ ಸರಕಾರದಿಂದ ಶಿವಕುಮಾರ್‌ ಮೇಲೆ ಎಫ್‌ಐಆರ್‌ ದಾಖಲಿಸಲು ಅನುಮತಿ ಪಡೆದಿತ್ತು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಅದು ಪ್ರಸ್ತುತ ವಿಚಾರಣೆ ನಡೆಸುತ್ತಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ