Breaking News

ಸಮರ್ಥ ಪ್ರತಿಪಕ್ಷವಾಗಿ ನಾವು ಕಾರ್ಯ ನಿರ್ವಹಿಸುತ್ತೇವೆ: ಬಸವರಾಜ ಬೊಮ್ಮಾಯಿ‌

Spread the love

ಬೆಂಗಳೂರು: ಎರಡು ಮೂರು ದಿನಗಳಲ್ಲಿ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಸಭೆ ನಡೆಸಲಿದ್ದು, ಸಭೆಯಲ್ಲೇ ಪ್ರತಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ.

ಇದೊಂದು ಸೋಲಿನಿಂದ ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ನಾವು ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ. ಸಮರ್ಥ ಪ್ರತಿಪಕ್ಷವಾಗಿ ನಾವು ಕಾರ್ಯ ನಿರ್ವಹಿಸುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಆರ್. ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣಾ ಫಲಿತಾಂಶದ ಆರು ದಿನಗಳ ಬಳಿಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ. ಕೆ.‌ ಶಿವಕುಮಾರ್ ಆಯ್ಕೆ ಆಗಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವದ ತೀರ್ಪು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.

ರಾಜಕಾರಣದಲ್ಲಿ ಪಾತ್ರಗಳನ್ನು ತೀರ್ಮಾನಿಸುವುದು ಜನ. ನಮಗೆ ವಿಪಕ್ಷವಾಗಿ ಜನ ತೀರ್ಪು ಕೊಟ್ಟಿದ್ದಾರೆ. ಕಾಂಗ್ರೆಸ್ ಮೇಲೆ ಜನ ಬಹಳಷ್ಟು ವಿಶ್ವಾಸ ಇಟ್ಟಿದ್ದಾರೆ. ಗ್ಯಾರಂಟಿಗಳ ಮೇಲೆ ಜನರಿಗೆ ದೊಡ್ಡ ವಿಶ್ವಾಸ ಇದೆ. ಅದನ್ನು ಅವರು ಪೂರೈಸಬೇಕಾಗಿದೆ. ಪೂರೈಸುವ ವೇಳೆ ರಾಜ್ಯದ ಆರ್ಥಿಕ ಸ್ವಾಸ್ಥ್ಯ ಹಾಳಾಗದಂತೆ ನೋಡಿಕೊಳ್ಳುವುದು ಕೂಡ ಅವರ ಜವಾಬ್ದಾರಿ. ಕಾಂಗ್ರೆಸ್​ನವರು ಯಾವ ರೀತಿ ನಿಭಾಯಿಸುತ್ತಾರೆ ಅಂತ ಕಾದು ನೋಡೋಣ ಎಂದು ತಿಳಿಸಿದರು.

ವಿಪಕ್ಷವಾಗಿ ನಾವು ಜವಾಬ್ದಾರಿಯಿಂದ ಕೆಲಸ ಮಾಡುವ ಅವಶ್ಯಕತೆ ಇದೆ. ನೆಲ-ಜಲ ವಿಚಾರದಲ್ಲಿ ರಾಜಕೀಯ ಬೆರೆಸದೇ ಕೆಲಸ ಮಾಡಬೇಕು. ಜನರಿಗೆ ಅನ್ಯಾಯ ಆದಾಗ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಕೆಲಸ ಮಾಡುತ್ತೇವೆ. 2023 ರಾಜ್ಯದ ಒಟ್ಟಾರೆ ಅಭಿವೃದ್ಧಿ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ. ಹಾಗೂ ಜೊತೆ ಜೊತೆಗೆ ಸವಾಲುಗಳೂ ಇವೆ. ಕರ್ನಾಟಕ ಸುಭಿಕ್ಷವಾಗಿರುವ ನಾಡು. ಜನ ಶಾಂತಿಯನ್ನು ಮಾನ್ಯ ಮಾಡುವಂತಹವರು. ಕರ್ನಾಟಕದ ಅಭ್ಯುದಯ ದೇಶಕ್ಕೆ ಪರಿಣಾಮ ಬೀರುತ್ತದೆ. ಈ ಆಯಾಮಗಳ ಮೇಲೆ ವಿಪಕ್ಷವಾಗಿ ನಾವು ಇರುತ್ತೇವೆ ಎಂದು ಬೊಮ್ಮಾಯಿ ಹೇಳಿದರು.

ನಮ್ಮ ಸೋಲಿನ ಪರಾಮರ್ಶೆ ಬೇರೆ ಬೇರೆ ಹಂತದಲ್ಲಿ ನಡೆಯುತ್ತಿದೆ. ಎರಡು ಮೂರು ದಿನಗಳಲ್ಲಿ ಶಾಸಕರ ಮತ್ತು ಪರಾಜಿತ ಅಭ್ಯರ್ಥಿಗಳ ಸಭೆ ಮಾಡುತ್ತೇವೆ. ಅದೇ ಸಭೆಯಲ್ಲಿ ವಿಪಕ್ಷ ನಾಯಕರ ತೀರ್ಮಾನ ಮಾಡುತ್ತೇವೆ. ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇಲ್ಲ. ಕೆಲವು ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ನಾವು ಹಿಂದೆ ಬಿದ್ದಿದ್ದು, ಚುನಾವಣಾ ತಯಾರಿಯಲ್ಲಿ ಕಾಂಗ್ರೆಸ್ ಮುಂದೆ ಇದ್ದಿದ್ದು ಸೋಲಿಗೆ ಕಾರಣವಾಗಿದೆ. ಒಂದು ಸೋಲಿಂದ ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ, ನಮ್ಮದು ರಾಷ್ಟ್ರೀಯ ಪಕ್ಷ, ಹಲವು ರಾಜ್ಯ ಗೆದ್ದಿದ್ದೇವೆ. ಹಲವು ರಾಜ್ಯದಲ್ಲಿ ಸೋತಿದ್ದೇವೆ. ನಾವು ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ ಎಂದರು.

ರಾಜ್ಯ ವಿಧಾಸಭೆಗೆ ಮೇ 10 ರಂದು ಚುನಾವಣೆ ನಡೆದಿತ್ತು. ಮೇ 13 ರಂದು ಫಲಿತಾಂಶ ಹೊರಬಿದ್ದಿತ್ತು. ಈ ಬಾರಿ ಕಾಂಗ್ರೆಸ್​ ಪಕ್ಷ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆದು, ಸರ್ಕಾರ ರಚನೆಗೆ ಮುಂದಾಗಿದೆ. ಬಿಜೆಪಿ 66 ಸ್ಥಾನಗಳನ್ನು ಗೆದ್ದಿದ್ದು, ಪ್ರತಿಪಕ್ಷದಲ್ಲಿ ಕೂರಲಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ