Breaking News

ಕ್ರೂಸರ್‌ ಟ್ರಾಕ್ಟರ್‌ ನಡುವೆ ಮುಖಾಮುಖಿ ಡಿಕ್ಕಿ

Spread the love

ವಿಜಯಪುರ : ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಸಮೀಪ ಯಲ್ಲಮ್ಮ ದೇವಿ ದರ್ಶನ ಮಾಡಿಕೊಂಡು ವಾಪಸ್‌ ಊರಿಗೆ ಹೋಗುತ್ತಿದ್ದ ಕ್ರೂಸರ್‌ ಹಾಗೂ ಕಟ್ಟಿಗೆಯನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಕ್ರೂಸರ್ ನಲ್ಲಿದ್ದ ರೇವಣಸಿದ್ದ ಜಾತಗೊಂಡ (14) ಹಾಗೂ ಅಮಸಿದ್ದ ಬಂಡೆ (27) ಸ್ಥಳದಲ್ಲಿ ಮೃತಪಟ್ಟಿದ್ದಾರೆ. 6ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಇಂಡಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ.

ಕ್ರೂಸರ್‌ ವಾಹನ ಸಂಪೂರ್ಣ ಜಖಂ ಆಗಿದ್ದು, ಮೃತರ ದೇಹಗಳು ಕೂಡ ಛಿದ್ರ, ಛಿದ್ರವಾಗಿವೆ.ಮೃತರು ಹಾಗೂ ಗಾಯಾಳು ಚಡಚಣ ತಾಲೂಕಿನ ಲಮಾಣಹಟ್ಟಿ ಗ್ರಾಮದ ನಿವಾಸಿಗಳು. ಕಲಬುರಗಿ ಜಿಲ್ಲೆ ಅಫಜಲಪೂರ ತಾಲೂಕಿನ ಮಣೂರು ಯಲ್ಲಮ್ಮ ದೇವರ ದರ್ಶನ ಮಾಡಿಕೊಂಡು ವಾಪಸ್ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಯತೀಂದ್ರ ಹೇಳಿಕೆಗೆ ನಮ್ಮ ಸಹಮತವಿದೆ:ಕೆ.ಎನ್.ರಾಜಣ್ಣ

Spread the loveಬೆಂಗಳೂರು: ಯತೀಂದ್ರ ಹೇಳಿಕೆಗೆ ನಮ್ಮ ಸಹಮತವಿದೆ. ತಪ್ಪೇನಿದೆ ಅದರಲ್ಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ