Breaking News

ಎನ್‌ಕೌಂಟರ್ ಸ್ಪೆಷಲಿಸ್ಟ್’ ದಯಾ ನಾಯಕ್ ಈಗ ಮುಂಬೈ ಕ್ರೈಂ ಬ್ರ್ಯಾಂಚ್‌ ಇನ್ಸ್‌ಪೆಕ್ಟರ್!

Spread the love

ಮುಂಬೈ: ‘ಎನ್‌ಕೌಂಟರ್ ಸ್ಪೆಷಲಿಸ್ಟ್ ‘ ಎಂದೇ ಪ್ರಖ್ಯಾತರಾದ ಖಡಕ್‌ ಪೊಲೀಸ್ ಅಧಿಕಾರಿ, ಕರ್ನಾಟಕ ಮೂಲದವರಾದ ದಯಾ ನಾಯಕ್ ಅವರು ಶನಿವಾರ ಮುಂಬೈ ಪೊಲೀಸ್‌ ಅಪರಾಧ ವಿಭಾಗದ 9 ನೇ ಘಟಕದ ಇನ್ಸ್​ಪೆಕ್ಟರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದಲ್ಲಿ ಮೂರು ವರ್ಷಗಳ ಅವಧಿ ಪೂರ್ಣಗೊಳಿಸಿದ್ದ ನಾಯಕ್ ಅವರನ್ನು ಮಾರ್ಚ್ 28 ರಂದು ಎಟಿಎಸ್​ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾಯಿಸಲಾಗಿತ್ತು.

ಈ ಕುರಿತು ಟ್ವೀಟ್​ ಮಾಡಿರುವ ದಯಾ ನಾಯಕ್, “ಎಟಿಎಸ್ ಮಹಾರಾಷ್ಟ್ರದಲ್ಲಿ ಮೂರು ವರ್ಷಗಳ ಅವಧಿಯನ್ನು ಪೂರೈಸಿದ ನಂತರ ಇಂದು ನಾನು ಪ್ರತಿಷ್ಠಿತ ಮುಂಬೈ ಕ್ರೈಂ ಬ್ರಾಂಚ್‌ನಲ್ಲಿ ಹೊಸ ಪೋಸ್ಟಿಂಗ್‌ಗೆ ಸೇರಿದ್ದೇನೆ. ಎಲ್ಲರ ನಿರೀಕ್ಷೆಗಳಿಗೆ ತಕ್ಕಂತೆ ಬದುಕಲು ಮತ್ತು ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಮುಂಬೈಗೆ ಸೇವೆ ಸಲ್ಲಿಸಲು ಬಯಸುತ್ತೇನೆ. ಜೈ ಹಿಂದ್, ಜೈ ಮಹಾರಾಷ್ಟ್ರ” ಎಂದು ತಿಳಿಸಿದ್ದಾರೆ. ಇನ್ನು ನಾಯಕ್ ಜೊತೆ ಇತರೆ ಐವರು ಅಧಿಕಾರಿಗಳು ಸಹ ಉಪನಗರ ಮನ್ಖುರ್ದ್, ಮರೈನ್ ಡ್ರೈವ್, ಕಾಂದಿವಲಿ ಮತ್ತು ಮುಂಬೈನ ಟ್ರಾಫಿಕ್ ಪೊಲೀಸ್‌ ಠಾಣೆಯ ವಿವಿಧ ಹುದ್ದೆಗೆ ಸೇರ್ಪಡೆಯಾಗಿದ್ದಾರೆ.

ಮಹಾರಾಷ್ಟ್ರ ರಾಜ್ಯ ಕೇಡರ್‌ನ 1995ರ ಬ್ಯಾಚ್ ಅಧಿಕಾರಿಯಾದ ದಯಾ ನಾಯಕ್ ಅವರು​, ಎಂಪಿಎಸ್​ಸಿ ಪರೀಕ್ಷೆ ಬರೆದು ಉತ್ತೀರ್ಣರಾದ ನಂತರ ಪೊಲೀಸ್ ಪಡೆಗೆ ನೇಮಕವಾಗಿದ್ದರು. ನಂತರ ಪಶ್ಚಿಮ ಉಪನಗರದ ಜುಹು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್​ ಇನ್ಸ್‌ಪೆಕ್ಟರ್ ಆಗಿ ಮೊದಲ ಪೋಸ್ಟಿಂಗ್​ ಆಗಿತ್ತು. ಈ ವೇಳೆ ಮುಂಬೈ ಅಪರಾಧ ವಿಭಾಗದ ಪೊಲೀಸ್ ಅಧಿಕಾರಿ ಮತ್ತು ಎನ್‌ಕೌಂಟರ್ ಸ್ಪೆಷಲಿಸ್ಟ್ ಪ್ರದೀಪ್​ ಶರ್ಮಾ ಅವರೊಂದಿಗೆ ದಯಾ ನಾಯಕ್ ಕೆಲಸ ಮಾಡಿದ್ದರು.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ