Breaking News

16ನೇ ವಿಧಾನಸಭೆಯ ಮೊದಲ ಅಧೀವೇಶನ ಆರಂಭ

Spread the love

ಬೆಂಗಳೂರು: ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧೀವೇಶನ ಆರಂಭವಾಗಿದ್ದು, ಮೂರು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ನೂತನ ಶಾಸಕರ ಪ್ರಮಾಣವಚನ, ಸ್ಪೀಕರ್ ಆಯ್ಕೆ ನಡೆಯಲಿದೆ.

ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಕಾರ್ಯನಿರ್ವಹಣೆಯಲ್ಲಿ ಅಧಿವೇಶನ ಆರಂಭವಾಗಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ವರುಣಾ ಕ್ಷೇತ್ರದ ಶಾಸಕರಾದ ಸಿಎಂ ಸಿದ್ದರಾಮಯ್ಯ ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕನಕಪುರದ ಶಾಸಕರಾದ ಡಿಸಿಎಂ ಡಿ.ಕೆ.ಶಿವಕುಮಾರ್ ಗಂಗಾದರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್, ದೇವನಹಳ್ಳಿ ಶಾಸಕರಾದ ಕೆ.ಹೆಚ್.ಮುನಿಯಪ್ಪ, ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ, ಮಂಗಳೂರು ಶಾಸಕರಾಗಿ ಯು.ಟಿ.ಖಾದರ್, ಧಾರವಾಡ ಪಶ್ಚಿಮ ಕ್ಷೇತ್ರದ ಶಸಕರಾಗಿ ಅರವಿಂದ್ ಬೆಲ್ಲದ್, ಬಸವನಬಾಗೇವಾಡಿ ಶಾಸಕರಾಗಿ ಶಿವಾನಂದ್ ಪಾಟೀಲ್ ಸೇರಿದಂತೆ ಹಲವು ನೂತನ ಶಾಸಕರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ

ಅಧಿವೇಶನದ ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಳಿಕ ನೂತನ ಸ್ಪೀಕರ್ ಆಯ್ಕೆ ನಡೆಯಲಿದೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ