Breaking News

ವಿದ್ಯುತ್ ತಂತಿ ತಗುಲಿ ಬಾಲಕಿ ದುರ್ಮರಣ

Spread the love

ಬೆಳಗಾವಿ: ಮನೆ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿ ತಗುಲಿ ಬಾಲಕಿ ಸಾವನ್ನಪ್ಪಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯ ಮಚ್ಚೆ ಗ್ರಾಮದ ಮನೆಯಲ್ಲಿ ನಡೆದಿದೆ.

13 ವರ್ಷದ ಮಧುರಾ ಕೇಶವ್ ಮೋರೆ ಮೃತ ಬಾಲಕಿ. ಖಾನಾಪುರ ತಾಲೂಕಿನ ಮಾಚಿಘಡ ಗ್ರಾಮದ ನಿವಾಸಿ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಸೋದರ ಮಾವನ ಮನೆಗೆ ಬಂದಿದ್ದಾಗ ಈ ದುರಂತ ಸಂಭವಿಸಿದೆ.

ಮನೆ ಮೇಲೆ ಆಟವಾಡುತ್ತಿದ್ದಾಗ ಬಾಲಕಿಗೆ ವಿದ್ಯುತ್ ತಂತಿ ತಗುಲಿ ಬಾಲಕಿ ಸಾವನ್ನಪ್ಪಿದ್ದಾಳೆ. ಹಲವು ಬಾರಿ ಹೆಸ್ಕಾಂ ಗೆ ಹೇಳಿದರು ಅಧಿಕಾರಿಗಳು ವಿದ್ಯುತ್ ತಂತಿ ಸರಿಪಡಿಸಿರಲಿಲ್ಲ. ಅಧಿಕಾರಿಗಳ ನಿರ್ಲಕ್ಷಕ್ಕೆ ಬಾಲಕಿ ಮೃತಪಟ್ಟಿದ್ದಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ