ತಮ್ಮ ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಸಲ್ಲಿಸಿದ್ದು ರಾಜೀನಾಮೆ ಪತ್ರವನ್ನು ದೇವೇಗೌಡರು ಇನ್ನೂ ಅಂಗೀಕರಿಸಿಲ್ಲ. ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಸಿಎಂ ಇಬ್ರಾಹಿಂ, ‘ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಹೀಗಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದರು.
ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅವರಿಗೆ ಶುಭವಾಗಲಿ. ರಾಜ್ಯದಲ್ಲಿ ಬಿಜೆಪಿ ಆಡಳಿತ ವಿರೋಧಿ ಅಲೆ ಇತ್ತು. ಇದನ್ನು ಕಾಂಗ್ರೆಸ್ನವರು ಹಣಬಲ ಸೇರಿದಂತೆ ಬೇರೆ ಬೇರೆ ವಿಚಾರದಲ್ಲಿ ಗೆದ್ದಿದ್ದಾರೆ.
ನಮ್ಮದು ಪ್ರಾದೇಶಿಕ ಪಕ್ಷ. ಹಣ ಇಲ್ಲ. ನಮಗೆ ಯಾರ ಬೆಂಬಲವೂ ಇರಲಿಲ್ಲ. ಆದರೂ ನಾವು 60 ಲಕ್ಷ ಮತ ಪಡೆದಿದ್ದೇವೆ ಎಂದರು.ಲೋಕಸಭೆ ಚುನಾವಣೆ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಗೆ ಒಟ್ಟಾಗಿ ಕೆಲಸ ಪ್ರಾರಂಭಿಸುತ್ತೇವೆ. ನೂತನ ಮುಖ್ಯಮಂತ್ರಿಗೆ ಒಳ್ಳೆಯದಾಗಲಿ. ಕೊಟ್ಟ ಭರವಸೆ ಈಡೇರಿಸಲಿ. 3 ತಿಂಗಳು ಸವರಿಗೆ ಸಮಯ ಕೊಡ್ತೀವಿ. 3 ತಿಂಗಳು ಹನಿಮೂನ್ ಸಮಯ. ಅಧಿಕಾರ ಯಂತ್ರ ಬೇಗನೆ ಆರಂಭವಾಗಲಿ ಎಂದು ಸಿಎಂ ಇಬ್ರಾಹಿಂ ಹೇಳಿದರು.