Breaking News

ದೆಹಲಿಯಲ್ಲಿ ಸಿಎಂ, ಡಿಸಿಎಂ: ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್​ ಜೊತೆ ಚರ್ಚೆ

Spread the love

ನವದೆಹಲಿ: ವಿಶೇಷ ಅಧಿವೇಶನದಲ್ಲಿ ಎಲ್ಲಾ ಶಾಸಕರ ಪ್ರಮಾಣ ವಚನ ಸ್ವೀಕಾರವಾಗುತ್ತಿದ್ದಂತೆ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದೆ.

ಮಧ್ಯಾಹ್ನ 3 ಗಂಟೆಯಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮತ್ತು ಸಂಜೆ ಆರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸಿದ್ದರು. ಶಿವಕುಮಾರ್​ ಮೊದಲೇ ದೆಹಲಿ ತಲುಪಿದ್ದರು. ಸಿದ್ದರಾಮಯ್ಯ ಈಗ ದೆಹಲಿ ತಲುಪಿದ್ದು, ಕಾಂಗ್ರೆಸ್ ಉನ್ನತ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಈ ನಾಯಕರ ಜೊತೆ ಬೆಂಬಲಿಗರು ಸಹ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಮಂತ್ರಿಗಿರಿಗಾಗಿ ಕಸರತ್ತು ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಇಂದು ಸಂಜೆ ಹೊರಟಿರುವುರಿಂದ ನಾಳೆ ಹೈಕಮಾಂಡ್ ಜೊತೆಗೆ ಸಿಎಂ ಮತ್ತು ಡಿಸಿಎಂ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ. ನಾಳೆಯ ಸಭೆಯಲ್ಲ ಪ್ರಬಲ ಸಚಿವ ಸ್ಥಾನ ಆಕಾಂಕ್ಷಿಗಳೂ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ದೆಹಲಿ ತಲುಪಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಮಾತನಾಡಿ,”ಇದು ಸಾಮಾನ್ಯ ಭೇಟಿಯಾಗಿದ್ದು, ರಾಜ್ಯದ ಸಮಸ್ಯೆಗಳ ಕುರಿತು ಚರ್ಚಿಸಲು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡುತ್ತಿದ್ದೇವೆ. ನಾವು ನಮ್ಮ ಸಚಿವ ಸಂಪುಟ ವಿಸ್ತರಣೆಯನ್ನು ಆದಷ್ಟು ಬೇಗ ಮುಗಿಸಬೇಕು. ಅದು ಪ್ರಕ್ರಿಯೆಯಲ್ಲಿದೆ. ಮುಖ್ಯಮಂತ್ರಿ ಕೂಡ ಬರಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಉನ್ನತ ನಾಯಕರನ್ನು ಭೇಟಿ ಮಾಡಲಾಗುವುದು” ಎಂದು ಹೇಳಿದ್ದಾರೆ.

ಪಕ್ಷದೊಳಗಿನ ಭಿನ್ನಾಭಿಪ್ರಾಯ ಬಗ್ಗೆ ಕೇಳಲಾದ ಪ್ರಶ್ನೆಗೆ, ಪಕ್ಷದ ಅಧ್ಯಕ್ಷನಾಗಿ ನಾನು ನಿಮಗೆ ಹೇಳುತ್ತಿದ್ದೇನೆ, ಯಾವುದೇ ಆಂತರಿಕ ಸಮಸ್ಯೆಗಳಿಲ್ಲ. ಎಲ್ಲ ಕಾರ್ಯಕರ್ತರು ಸಚಿವರಾಗಲು ಬಯಸುತ್ತಾರೆ. ಈ ಹಿನ್ನೆಲೆಯಲ್ಲಿ ಒತ್ತಡಗಳು ಬರುವುದು ಸಹಜ. ಇದು ಯಾವುದೇ ಆಂತರಿಕ ಸಮಸ್ಯೆಯಲ್ಲ”ಎಂದರು.

ಮೇ 20 ರಂದು ಎಂಟು ಸಚಿವರೊಂದಿಗೆ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಕ್ರಮವಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ನಡುವೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ಖಾತೆ ಹಂಚಿಕೆಯಾಗಿಲ್ಲ. ಮುಖ್ಯಮಂತ್ರಿ ಸ್ಥಾನದ ಕಸರಿತ್ತಿನ ಸಮಯದಲ್ಲೇ ಎಂಟು ಜನ ಶಾಸಕರಿಗೆ ಅವಕಾಶ ಮಾಡಿಕೊಡಲಾಗಿತ್ತು. ಹೀಗಾಗಿ ಉಳಿದ ಆಕಾಕ್ಷಿಗಳು ಸಹ ದೆಹಲಿಯತ್ತ ಪ್ರಯಾಣ ಬೆಳಸಿದ್ದಾರೆ. ಕರ್ನಾಟಕದಲ್ಲಿ ಗರಿಷ್ಠ 34 ಮಂದಿ ಸಚಿವರಾಗಬಹುದಾಗಿದ್ದು, ಎಲ್ಲ ಆಕಾಂಕ್ಷಿಗಳಿಗೆ ಅವಕಾಶ ಕಲ್ಪಿಸುವುದು ಕಾಂಗ್ರೆಸ್​ಗೆ ಕಷ್ಟವಾಗಲಿದೆ.

ಸಚಿವಾಕಾಂಕ್ಷಿಗಳು ದೆಹಲಿಯತ್ತ: ಶಾಸಕ ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ನಾಗೇಂದ್ರ, ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಹಲವು ಶಾಸಕರು ಈಗಾಗಲೇ ದೆಹಲಿಯಲ್ಲಿದ್ದಾರೆ. ದೆಹಲಿ ಭೇಟಿಗೂ ಮುನ್ನ ಮಾತನಾಡಿದ ದಿನೇಶ್ ಗುಂಡೂರಾವ್, ಹೊಸ ಸರ್ಕಾರದಲ್ಲಿ ಹಲವಾರು ಜನ ಸಚಿವ ಸ್ಥಾನದ ಆಕಾಕ್ಷಿಗಳಿದ್ದಾರೆ. ಅದರಂತೆ ನಾನು ಕೂಡಾ ದೆಹಲಿಗೆ ತೆರಳುತ್ತಿದ್ದೇನೆ. ಇನ್ನು ಎರಡು ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನಾನೂ ಆಕಾಂಕ್ಷಿ ಆಗಿರುವುದರಿಂದ ಯಾವ ಖಾತೆ ಕೊಡುತ್ತಾರೆ ಎಂದು ಕಾದುನೋಡಬೇಕಿದೆ ಎಂದಿದ್ದಾರೆ.

ವಿಜಯಾನಂದ ಕಾಶಪ್ಪನವರ್ ಮಾತನಾಡಿ, ನಾನು ಲಿಂಗಾಯತ ಸಮಾಜಕ್ಕೆ ಸೇರಿದವನು ಮತ್ತು ಬಾಗಲಕೋಟೆ ಜಿಲ್ಲೆಗೆ ಹಲವು ವರ್ಷಗಳಿಂದ ಸಚಿವ ಸ್ಥಾನ ಸಿಕ್ಕಿಲ್ಲ. ಅಲ್ಲದೇ ನಾನು ಪ್ರಭಲ ಆಕಾಂಕ್ಷಿಯಾಗಿದ್ದೇನೆ. ಈ ಎಲ್ಲಾ ಅಂಶಗಳನ್ನು ಹೈಕಮಾಂಡ್ ಮುಂದೆ ಮಂಡಿಸಲಿದ್ದೇನೆ ಎಂದಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ