Breaking News

ಪಾಲಿಕೆ ಸ್ಮಾರ್ಟ್ ಸಿಟಿ ನಡುವೆ ಹಗ್ಗಜಗ್ಗಾಟ: ಕಾಮಗಾರಿ ಮುಗಿದರೂ ಇನ್ನೂ ಹಸ್ತಾಂತರವಾಗದೇ ಉಳಿದ ಪ್ರಾಜೆಕ್ಟ್​ಗಳು

Spread the love

ಹುಬ್ಬಳ್ಳಿ: ಅದು ಹುಬ್ಬಳ್ಳಿ-ಧಾರವಾಡ ಅವಳಿನಗರದ ಮಹತ್ವದ ಯೋಜನೆ. ಈ ಯೋಜನೆ ಪ್ರಾರಂಭವಾದಾಗಿನಿಂದಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಈ ಯೋಜನೆ ಕಾಮಗಾರಿ ವಿಳಂಬ ಒಂದು ಕಡೆಯಾದರೆ ಮತ್ತೊಂದು ಕಡೆಯಲ್ಲಿ ಪೂರ್ಣಗೊಂಡಿದ್ದರೂ ಪಾಲಿಕೆಗೆ ಹಸ್ತಾಂತರ ಮಾಡಿಲ್ಲ. ಇದು ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ.

2018ರಲ್ಲಿ ಅಸ್ತಿತ್ವಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಸ್ಮಾರ್ಟ್‌ಸಿಟಿ ಯೋಜನೆಗಳಲ್ಲಿ ಪೂರ್ಣಗೊಂಡ ಕಾಮಗಾರಿಗಳ ಹಸ್ತಾಂತರ ವಿಚಾರ ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್‌ಸಿಟಿ ಮಧ್ಯೆ ಮುಸುಕಿನ ಗುದ್ದಾಟಕ್ಕೆ ಎಡೆಮಾಡಿಕೊಟ್ಟಿದೆ.‌ ಕಾಮಗಾರಿ ಮುಕ್ತಾಯವಾದರೂ ಹಸ್ತಾಂತರ ಪ್ರಕ್ರಿಯೆ ವಿಳಂಬವಾಗುತ್ತಿವೆ.

ಈ ನಡುವೆ ಪೂರ್ಣಗೊಂಡ ಕಾಮಗಾರಿಗಳ ವರದಿ ಪರಿವೀಕ್ಷಣೆಗೆ ಮೇಯರ್ ಮತ್ತೊಂದು ತಂಡ ರಚಿಸಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಇದು ಸ್ಮಾರ್ಟ್‌ಸಿಟಿ ಕಂಪನಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಇದರಿಂದ ಹಸ್ತಾಂತರ ಕುರಿತಾಗಿ ಅಧಿಕಾರಿಗಳ ಲೆಕ್ಕಾಚಾರ ಬುಡಮೇಲಾಗಿದೆ.

ಹಲವಾರು ಪ್ರಾಜೆಕ್ಟ್ ಬಾಕಿ: ಏಕೆಂದರೆ ಸ್ಮಾರ್ಟ್‌ಸಿಟಿ ಕಂಪನಿ ನಿಯಮಾವಳಿ ಪ್ರಕಾರ, ಐದು ವರ್ಷದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಿ ಸ್ಥಳೀಯ ಆಡಳಿತ ಪಾಲಿಕೆಗೆ ಹಸ್ತಾಂತರಿಸಬೇಕು. ಇದೀಗ ಐದು ವರ್ಷ ಅವಧಿ ಮುಗಿದಿದ್ದು, ಇನ್ನೂ ಯೋಜನೆಗಳನ್ನು ವಹಿಸಿಕೊಡಲು ಸಾಧ್ಯವಾಗುತ್ತಿಲ್ಲ. ಈಗ ಕೇವಲ 21 ಪ್ರಾಜೆಕ್ಟ್ ಗಳನ್ನು ಮಾತ್ರ ಪಾಲಿಕೆಗೆ ಹಸ್ತಾಂತರ ಮಾಡಿರುವ ಸ್ಮಾರ್ಟ್ ಸಿಟಿ ಇನ್ನೂ ಹಲವಾರು ಪ್ರಾಜೆಕ್ಟ್ ಬಾಕಿ ಉಳಿಸಿಕೊಂಡಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ