Breaking News

ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

Spread the love

ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿ ಯುವಕ ತೋಟದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಮೃತ ಯುವಕ ಶಿವಪ್ಪಾ ಬಾಬು ಕಿವಡಿ (28) ಎಂದು ತಿಳಿದುಬಂದಿದೆ. ಈತ ತಮ್ಮ ತೋಟದಲ್ಲಿ ಸಂಶಯಾಸ್ಪದ ರೀತಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಐಗಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಅಥಣಿ ಸಿಪಿಐ, ಐಗಳಿ ಪೊಲೀಸ್‌ ಠಾಣೆಯ ಪಿಎಸ್​ಐ ಪರಿಶೀಲನೆ ನಡೆಸಿದರು.

ಈ ಕುರಿತು ಮೃತನ ಪಾಲಕರು ದೂರು ನೀಡಿದ್ದು, ಯುವಕನ ಶವದ ಮರಣೋತ್ತರ ಪರೀಕ್ಷೆ ಬಳಿಕವಷ್ಟೇ ಸತ್ಯಾಂಶ ಬಯಲಿಗೆ ಬರಲಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ