Breaking News

ನಿತಿನ್​ ಗಡ್ಕರಿಗೆ ಕೊಲೆ ಬೆದರಿಕೆ: ಹಿಂಡಲಗಾ ಜೈಲಿನ ಕೈದಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಎನ್‌ಐಎ

Spread the love

ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಎನ್‌ಐಎ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ.

ಜಯೇಶ್ ಪೂಜಾರಿ ಎಂಬ ಆರೋಪಿ ಕೊಲೆ ಪ್ರಕರಣವೊಂದರಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಬಂಧಿಯಾಗಿದ್ದ. ಮೊದಲಿಗೆ ಜ.14ರಂದು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕುವುದರ ಜೊತೆಗೆ 10 ಕೋಟಿ ರೂ. ಹಣಕ್ಕೆ ಬೇಡಿಕೆ ಹಾಕಿದ್ದ.

ಇದಾದ ಬಳಿಕ ಮಾರ್ಚ್​ 21ರಂದು ಮತ್ತೆ ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿಯವರಿಗೆ ಜೀವ ಬೆದರಿಕೆ ಹಾಕಿದ್ದ. ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿದಾಗ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಯು ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕಿದ್ದು ಬಹಿರಂಗವಾಗಿತ್ತು.

ಇನ್ನು, ಆರೋಪಿ ಜಯೇಶ ತಾನು ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯ ಎಂದು ನಿತಿನ್ ಗಡ್ಕರಿಯವರಿಗೆ ಕೊಲೆ ಬೆದರಿಕೆ ಹಾಕಿದ್ದ. ಆ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ಈತನ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ಅಲ್ಲದೇ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಎಫ್‌ಐಆರ್ ಮಾಹಿತಿ ರವಾನಿಸಿದ್ದಾಗಿ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ