Breaking News

ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯ

Spread the love

ರಾಮನಗರ: ವಿಧಾನಸಭಾ ಚುನಾವಣೆ ವೇಳೆ ಮತದಾರರ ಮನವೊಲಿಕೆಗೆ ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕೂನಮುದ್ದನಹಳ್ಳಿಯಲ್ಲಿ ನಡೆದಿದೆ.

ಬಾಲಕಿ ಮಹಾಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದಾಳೆ. ಚುನಾವಣೆಯ ವೇಳೆ ನೀಡಿದ್ದ ಕುಕ್ಕರ್ ನಿಂದ ಮೊದಲ ಬಾರಿಗೆ ಅಡುಗೆ ಮಾಡುತ್ತಿದ್ದರು. ಈ ವೇಳೆ ಕುಕ್ಕರ್ ಸಿಡಿದಿದ್ದು, ಬಾಲಕಿಯ ಮುಖ ಸೇರಿದಂತೆ ಹಲವೆಡೆ ಗಾಯಗಳಾಗಿವೆ.

ಗಾಯಾಳು ಬಾಲಕಿಯನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಚುನಾವಣೆ ವೇಳೆ ಹಂಚುವ ಕುಕ್ಕರ್ ಗೆ ಮರುಳಾಗಬೇಡಿ ಎಂದು ಜನರಿಗೆ ವಿನಂತಿಸಿದ್ದೆ. ಈ ಬಗ್ಗೆ ಚರ್ಚೆಯಾಗಬೇಕು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ದೆಹಲಿಗೆ ತೆರಳಲಿರುವ ಸಿಎಂ ಸಿದ್ಧರಾಮಯ್ಯ…

Spread the love ದೆಹಲಿಗೆ ತೆರಳಲಿರುವ ಸಿಎಂ ಸಿದ್ಧರಾಮಯ್ಯ… ಡಿನ್ನರ್ ಪಾರ್ಟಿಗೆ ಅವರೇನು ನನ್ನನ್ನು ಕರೆದಿಲ್ಲ; ಗೃಹ ಸಚಿವ ಜಿ.ಪರಮೇಶ್ವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ