Breaking News

ಮೇ 29ರಿಂದ ಸರ್ಕಾರಿ ಶಾಲೆಗಳು, ಪ್ರೌಢಶಾಲೆಗಳು ಪುನರಾರಂಭ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ವಾರ್ನಿಂಗ್

Spread the love

ಬೆಂಗಳೂರು: ಮೇ 29ರಿಂದ ಸರ್ಕಾರಿ ಶಾಲೆಗಳು, ಪ್ರೌಢಶಾಲೆಗಳು ಪುನರಾರಂಭ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ವಾರ್ನಿಂಗ್ ನೀಡಿದೆ.

ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಎಚ್ಚರವಹಿಸಿ, ಶಾಲೆಗಳು ಆರಂಭವಾಗುವ ಮೊದಲೇ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸರ್ಕಾರಿ ಶಾಲಾ ಶಿಕ್ಷಕರಿಗೆ ಆದೇಶ ನೀಡಿದೆ.

ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಈಗಾಗಲೇ ಆರಂಭವಾಗಿದೆ. ಶಾಲಾ ಕೊಠಡಿ, ಕಾಂಪೌಂಡ್, ಶೌಚಾಲಯಗಳನ್ನು ಪರಿಶಿಲಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಉಪನಿರ್ದೇಶಕರ ಗಮನಕ್ಕೆ ತರಬೇಕು. ಶಾಲಾ ಕೊಠಡಿಗಳ ದುರಸ್ಥಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಅಲ್ಲದೇ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಸಿಹಿ ಉಪಹಾರವನ್ನು ವಿತರಿಸಬೇಕು ಎಂದು ತಿಳಿಸಲಾಗಿದೆ.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ