Breaking News

ಮಹಿಳಾ KAS ಅಧಿಕಾರಿಗೆ ಸಹೋದರನಿಂದಲೇ ಜೀವ ಬೆದರಿಕೆ: ಪ್ರಕರಣ ದಾಖಲು

Spread the love

ಬೆಂಗಳೂರು : ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಮಹಿಳಾ ಅಧಿಕಾರಿಗೆ ಸ್ವಂತ ಸಹೋದರನೇ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್​​​ ಅಧಿಕಾರಿ ಡಾ. ಮೈತ್ರಿ ನೀಡಿರುವ ದೂರಿನನ್ವಯ ಅವರ ಸಹೋದರ ಡಾ.ಸಂಜಯ್ ವಿರುದ್ಧ ಹಲ್ಲೆ, ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಜಯನಗರದಲ್ಲಿ ತಮ್ಮ ಕುಟುಂಬದೊಂದಿಗೆ ಡಾ. ಮೈತ್ರಿ ವಾಸವಿದ್ದು, ಸಹೋದರ ಡಾ. ಸಂಜಯ್ ಪ್ರತ್ಯೇಕವಾಗಿ ವಾಸವಿದ್ದರು. ಎರಡು ವರ್ಷಗಳಿಂದ ತಾನು ಹೊಸದಾಗಿ ಬ್ಯುಸಿನೆಸ್ ಮಾಡುತ್ತಿದ್ದೇನೆ, ಅದಕ್ಕಾಗಿ ಎರಡು-ಮೂರು ಕೋಟಿ ರೂ ಕೊಡು ಎಂದು ಕೇಳುತ್ತಿದ್ದ. ಆದರೆ ಹಣ ನೀಡಲು ಮೈತ್ರಿ ನಿರಾಕರಿಸಿದ್ದರಂತೆ. ಮೇ 11 ರಂದು ಕರ್ತವ್ಯ ಮುಗಿಸಿಕೊಂಡು ಮೈತ್ರಿಯವರು ಮನೆಗೆ ಬರುವ ಸಮಯಕ್ಕೆ ಸರಿಯಾಗಿ ಮನೆಗೆ ಬಂದಿದ್ದ ಸಂಜಯ್, ಮೈತ್ರಿ ಮೇಲೆ ಮಕ್ಕಳ ಮುಂದೆಯೇ ಹಲ್ಲೆ ಮಾಡಿದ್ದಾನೆ. ಅಲ್ಲದೇ ಹಣ ನೀಡದಿದ್ದಲ್ಲಿ ನಿನ್ನ ಮೇಲೆ ಭಾನಾಮತಿ ಮಾಡಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಡಾ.ಮೈತ್ರಿ ನೀಡಿರುವ ದೂರಿನ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಡಾ. ಸಂಜಯ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ