ಬೆಂಗಳೂರು, ಮೇ 27- ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ಕದಡುವ ಕೆಲಸ ಮಾಡುವ ಯಾವುದೇ ಸಂಘಟನೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59 ನೇ ಪುಣ್ಯ ತಿಥಿಯ ಅಂಗವಾಗಿ ಇಂದು ವಿಧಾನಸೌಧದ ಬಳಿ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರ ನಿಷೇಧ ಮಾಡುವ ಬಗ್ಗೆ ಸರ್ಕಾರ ಹೇಳಿಲ್ಲ. ಕಾನೂನು ಉಲ್ಲಂಘಿಸುವ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಮೂರು ದಿನಗಳ ಹಿಂದೆ ಮಾತನಾಡಿದ್ದ ಸಚಿವ ಪ್ರಿಯಾಂಕ ಖರ್ಗೆ ನಿಯಮ ಬಾಹಿರವಾಗಿ ಕೆಲಸ ಮಾಡುವ ಪಿಎಫ್ಐ, ಬಜರಂಗದಳ, ಸಂಘ ಪರಿವಾರ ಸೇರಿದಂತೆ ಯಾವುದೇ ಸಂಘಟನೆಗಳಾದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು.
ಇಂದು ಸ್ಪಷ್ಟನೆ ನೀಡಿದ್ದ ಸಿದ್ದರಾಮಯ್ಯ ಸಂಘ ಪರಿವಾರವನ್ನು ನಿಷೇಸುವುದಾಗಿ ಸರ್ಕಾರ ಹೇಳಿಲ್ಲ ಎಂದಿದ್ದಾರೆ.ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಯಾರು ಅಸಮಾಧಾನಗೊಂಡಿಲ್ಲ. ನನ್ನ ಬಳಿ ಅಸಮಾಧಾನ ಕುರಿತು ಯಾರು ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
Laxmi News 24×7