Breaking News

ಬೆಂಗಳೂರಲ್ಲಿ ವೃದ್ಧೆಯ ಕೈಕಾಲು ಕಟ್ಟಿ ಹತ್ಯೆಗೈದು ದರೋಡೆ

Spread the love

ಬೆಂಗಳೂರು: ಒಂಟಿ ವೃದ್ಧೆಯ ಕೈಕಾಲು ಕಟ್ಟಿ ಬರ್ಬರವಾಗಿ ಹತ್ಯೆಗೈದು, ಮನೆಯಲ್ಲಿದ್ದ ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಶನಿವಾರ ಸಂಜೆ‌ ಮಹಾಲಕ್ಷ್ಮಿ ಲೇಔಟಿನಲ್ಲಿ ನಡೆದಿದೆ.

ಕಮಲಮ್ಮ (80) ಹತ್ಯೆಯಾದ ವೃದ್ಧೆ. ಮೃತಳ ಪತಿ ಆರು ತಿಂಗಳ ಹಿಂದೆಷ್ಟೇ ಸಾವನ್ನಪ್ಪಿದ್ದರು. ಮೂವರು ಮಕ್ಕಳಿದ್ದು, ಅವರು ಸಹ ಬೇರೆ ಬೇರೆ ಕಡೆ ವಾಸವಿದ್ದರಿಂದ ಕಮಲಮ್ಮ ಒಬ್ಬರೇ ವಾಸವಿದ್ದರು.

ನಿನ್ನೆ(ಶನಿವಾರ) ಸಂಜೆ ಮನೆ ಪ್ರವೇಶಿಸಿರುವ ಹಂತಕರು‌ ವೃದ್ಧೆಯ ಕೈಕಾಲು‌ ಕಟ್ಟಿ, ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಲೆಗೈದಿದ್ದಾರೆ. ಬಳಿಕ ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಮಹಾಲಕ್ಷ್ಮೀ ಲೇಔಟ್ ಪೊಲೀಸರು ತನಿಖೆ ಆರಂಭಿಸಿದ್ದಾರೆ‌.

ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವ ತಯಾರಿಗೆ ಬಂದಿದ್ದ ಯುವಕ ಆತ್ಮಹತ್ಯೆಗೆ ಶರಣು: ಪೇಯಿಂಗ್ ಗೆಸ್ಟ್‌ ಕಟ್ಟಡವೊಂದರ ಕೊಠಡಿಯಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಗೋವಿಂದರಾಜನಗರ ಠಾಣಾ ವ್ಯಾಪ್ತಿಯ ಮಾರೇನಹಳ್ಳಿಯಲ್ಲಿ ಶನಿವಾರ ನಡೆದಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಬೀದರ್ ಮೂಲದ ಅಭಿಷೇಕ್ (19) ಆತ್ಮಹತ್ಯೆಗೆ ಶರಣಾದ ಯುವಕ. ಬಿ.ಎಸ್ಸಿ ವ್ಯಾಸಂಗ ಮಾಡಿದ್ದ ಅಭಿಷೇಕ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಮಾಡಿಕೊಳ್ಳಲು ಎರಡು ತಿಂಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದಿದ್ದ.

ಕೆಲ ದಿನಗಳ ಕಾಲ ಮೈಕೊಲೇಔಟ್ ಬಳಿ ಇರುವ ಸಂಬಂಧಿಕರ ಮನೆಯಲ್ಲಿ ವಾಸವಿದ್ದ. ನಂತರ ವಿಜಯನಗರ ಬಳಿಯ ಮಾರೇನಹಳ್ಳಿಯ ಪಿ.ಜಿ.ಗೆ ಶಿಫ್ಟ್ ಆಗಿದ್ದ. ನಿನ್ನೆ ಬೆಳಗ್ಗೆ ಕೊಠಡಿಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಅಭಿಷೇಕ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ಸಹ ತಿಳಿದುಬಂದಿಲ್ಲ. ಮೃತನ ಪೋಷಕರಿಗೆ ಪೊಲೀಸರು ಮಾಹಿತಿ ರವಾನಿಸಿದ್ದು, ಅವರು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ‌. ಈ ಪ್ರಕರಣ ಗೋವಿಂದರಾಜನಗರ ಠಾಣೆಯಲ್ಲಿ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ