Breaking News

ಸತೀಶ್ ಜಾರಕಿಹೊಳಿ, ಭರ್ಜರಿ ಮೆರವಣಿಗೆ

Spread the love

ಬೆಳಗಾವಿ: ಸಚಿವರಾಗಿ ಮೊದಲಬಾರಿಗೆ ಬೆಳಗಾವಿಗೆ ಆಗಮಿಸಿದ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಸತೀಶ್ ಜಾರಕಿಹೊಳಿ ಅವರನ್ನು ಭಾನುವಾರ ಸಂಜೆ ಬೆಳಗಾವಿಯಲ್ಲಿ ಅಭಿಮಾನಿಗಳು ಭರ್ಜರಿ ಮೆರವಣಿಗೆಯಲ್ಲಿ ಕರೆದೊಯ್ದರು. ತನ್ಮೂಲಕ ನಗರದ ವಿವಿಧ ಭಾಗಗಳಲ್ಲಿರುವ ಮಹಾನ್ ಐತಿಹಾಸಿಕ ವ್ಯಕ್ತಿಗಳ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.

ಕಾಂಗ್ರೆಸ್‌ ಭವನದಿಂದ ತೆರದ ವಾಹನದಲ್ಲಿ ನಗರಾದ್ಯಂತ  ನೂತನ ಸಚಿವರಾದ ಸತೀಶ್‌ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು.  ಶಾಸಕರಾದ ರಾಜು ಸೇಠ್‌, ಬಾಬಾ ಸಾಹೇಬ್‌ ಪಾಟೀಲ, ವಿಶ್ವಾಸ ವೈದ್ಯ, ಮಹೇಂದ್ರ ತಮ್ಮಣ್ಣವರ್, ಮಾಜಿ ಶಾಸಕ ಶಾಮ್‌ ಘಾಟಗೆ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಅನೇಕ ಕಾಂಗ್ರೆಸ್‌ ಮುಖಂಡರು ನೂತನ ಸಚಿವರಿಗೆ ಸಾಥ್‌ ನೀಡಿದರು.

ಮುಗಿಲು ಮುಟ್ಟಿದ ಸಂಭ್ರಮ: ಕರ್ನಾಟಕ ಸರಕಾರದಲ್ಲಿ ನೂತನವಾಗಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ನಗರಕ್ಕೆ ಆಗಮಿಸಿದ ಸತೀಶ್‌ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಕಾಂಗ್ರೆಸ್‌ ಮುಖಂಡರು, ಅಭಿಮಾನಿಗಳು, ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತಿಸಿದರು. ಅಲ್ಲದೇ  ನಗರದ ವಿವಿಧೆಡೆ ನಡೆದ ಮೆರವಣಿಗೆಯಲ್ಲಿ ನೂತನ ಸಚಿವರನ್ನು ನೋಡಿದ ಜನರು ಕೈ ಬೀಸಿ ಶುಭ ಹಾರೈಸಿದರು.

ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು:  ನಗರದ ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಗೆ  ಹೂ ಮಾಲೆ  ಅರ್ಪಿಸುವ ಸಮಯದಲ್ಲಿ ಅವರ ಅಪಾರ ಅಭಿಮಾನಿಗಳು ಪಟಾಕಿ ಸಿಡಿಸಿ ಜಯಘೋಷ ಹಾಕುವುದರ ಮೂಲಕ ಸಂಭ್ರಮಿಸಿದರು. ಜಿಲ್ಲೆಯ ನಾನಾ ಕಡೆಗಳಿಂದ ಕಾಂಗ್ರೆಸ್‌ ಪಕ್ಷ ದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಹೂ ಮಾಲೆಗಳನ್ನು ಸಮರ್ಪಿಸಿ ಶುಭ ಕೋರಿದರು.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ