Breaking News

‘ನಿಮ್ಮ ಪ್ರಾಮಾಣಿಕತೆಯನ್ನು ಒರೆಗೆ ಹಚ್ಚಿ ನೋಡಲಾಗುತ್ತದೆ. ನೀವು ಪಟ್ಟಿ ಕೊಡದಿದ್ದರೆ ನಾನೇ ನಿಮಗೆ ಪಟ್ಟಿ ಕೊಡುತ್ತೇನೆ. D.C.M.

Spread the love

ಬೆಂಗಳೂರು: ”ಕಳೆದ ಮೂರು ವರ್ಷಗಳಿಂದ ಬೆಂಗಳೂರಲ್ಲಿ ವಿಧಾನಸಭೆ ಕ್ಷೇತ್ರವಾರು ಆಗಿರುವ ಕೆಲಸ, ಯಾವ ಯೋಜನೆಯಡಿ ಕೆಲಸ ಆಗಿದೆ. ಅದಕ್ಕೆ ಆಗಿರುವ ಖರ್ಚಿನ ವಿವರ ಮತ್ತು ಕೆಲಸ ಆಗಿರುವ ಬಗ್ಗೆ ಫೋಟೋ, ವಿಡಿಯೋ ಮತ್ತಿತರ ದಾಖಲೆಗಳನ್ನು ಸರಕಾರಕ್ಕೆ ಒದಗಿಸಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ”ಬಿಬಿಎಂಪಿ ಅನುದಾನ ಪಡೆದು ಶುರು ಮಾಡದ ಕೆಲಸ, ಕಾಮಗಾರಿಗಳನ್ನು ಯತಾಸ್ಥಿತಿ ಕಾಪಾಡಿ. ಕಾಲಮಿತಿಯೊಳಗೆ ಪೂರ್ಣಗೊಳಿಸದ ಯೋಜನೆ ಕಾರ್ಯಗಳನ್ನು ತಡೆ ಹಿಡಿಯಬೇಕು. ಯಾವ ಯಾವ ಕಾಮಗಾರಿಗಳ ಕಾರ್ಯವಾಗಿದ್ದರೂ ಬಿಲ್ ಮಾಡಲಾಗಿದೆ. ಒಂದೇ ಕಾಮಗಾರಿಗೆ ಎರಡೆರಡು ಬಿಲ್ ಮಾಡಲಾಗಿದೆ. ಒಂದೇ ಕಾಮಗಾರಿಗೆ ಎರಡು ಕಂಪನಿಗಳಿಂದ ಬಿಲ್ ಆಗಿದೆ ಎಂಬ ಬಗ್ಗೆ ತನಿಖೆ ಮಾಡಿ, 10 ದಿನದೊಳಗೆ ಪಟ್ಟಿ ನೀಡಬೇಕು” ಎಂದು ಅವರು ತಾಕೀತು ಮಾಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ