ನವದೆಹಲಿ: ಕರ್ನಾಟಕ ಚುನಾವಣೆಯ ಗೆಲುವಿನ ಉತ್ಸಾಹದಲ್ಲಿರುವ ಕಾಂಗ್ರೆಸ್ ಮಧ್ಯಪ್ರದೇಶದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ ಎಂದು ನವದೆಹಲಿಯಲ್ಲಿ ಮಧ್ಯಪ್ರದೇಶ ನಾಯಕರೊಂದಿಗೆ ಚರ್ಚೆ ನಡೆಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭವಿಷ್ಯ ನುಡಿದರು.
ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಾಧ್ಯಕ್ಷ ಕಮಲ್ ನಾಥ್, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು. ಮಧ್ಯಪ್ರದೇಶದ ರಾಜ್ಯ ನಾಯಕರಿಗೆ ಪಕ್ಷದಲ್ಲಿರುವ ಬೇರೆ ಯಾವುದೇ ನಾಯಕರು ಹೇಳಿಕೆ ನೀಡುವಾಗ ಪಕ್ಷಕ್ಕೆ ಚ್ಯುತಿ ತರಬಾರದು ಎಂದು ರಾಹುಲ್ ಗಾಂಧಿ ಸಲಹೆ ನೀಡಿದರು.
ಮಧ್ಯಪ್ರದೇಶದಲ್ಲಿ ಗೆಲುವಿನ ಓಟ ಮುಂದುವರಿಸಲಿದೆ ಕಾಂಗ್ರೆಸ್- ರಾಹುಲ್ ಗಾಂಧಿ: ಮಧ್ಯಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ರಾಹುಲ್ ಗಾಂಧಿ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದರು. ಎಐಸಿಸಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಚುನಾವಣಾ ಸಿದ್ಧತೆ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಕರ್ನಾಟಕದಲ್ಲಿ ಗೆಲುವು ಸಾಧಿಸಿದ ನಂತರ ಮಧ್ಯಪ್ರದೇಶದಲ್ಲಿ ಪಕ್ಷವು ತನ್ನ ಗೆಲುವಿನ ಓಟವನ್ನು ಮುಂದುವರಿಸಲಿದೆ ಎಂದರು.