Breaking News

ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರ ಸಾವು

Spread the love

ಚಿಕ್ಕೋಡಿ (ಬೆಳಗಾವಿ): ರಾಜ್ಯದಲ್ಲಿ ಮುಂಗಾರು ಮಳೆ ಆಗಮನದ ಮೊದಲೇ ಗುಡಗು, ಸಿಡಿಲಿನ ಅಬ್ಬರ ಹೆಚ್ಚಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯಲ್ಲಿ ಅಥಣಿ ತಾಲೂಕಿನಲ್ಲಿ ಪ್ರತ್ಯೇಕ ಗ್ರಾಮದಲ್ಲಿ ಸಿಡಿಲು ಬಡೆದು ಒಬ್ಬ ಯುವಕ, ಒರ್ವ ಮಹಿಳೆ ಮೃತ ಪಟ್ಟಿದ್ದಾರೆ.

ತಾಲೂಕಿನ ಕೋಹಳ್ಳಿ ಗ್ರಾಮದ ಕೆಸ್ಕರಿ ದಡ್ಡಿ ನಿವಾಸಿಯಾದ ಅಮೂಲ್ ಜಯಸಿಂಗ ಕಾನಡೆ (24) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ತೋಟದಲ್ಲಿ ಆಡುಗಳನ್ನು ಮೇಯಿಸಲು ಹೋಗಿದ್ದ ಸಮಯದಲ್ಲಿ ಯುವಕನಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಂದು ಕಡೆ ಅಥಣಿ ತಾಲೂಕಿನ ದೇಸಾರಹಟ್ಟಿ ಗ್ರಾಮದಲ್ಲಿ ವಿಠ್ಠಬಾಯಿ ಮಹದೇವ ಕಾಮಕರ (50) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಇವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಡಿಯುಡಿ ಗ್ರಾಮದ ನಿವಾಸಿಯಾಗಿದ್ದು, ಅಥಣಿ ತಾಲೂಕಿನ ದೇಸಾರಹಟ್ಟಿ ಗ್ರಾಮದ ಮಗಳ ಮನೆಗೆ ಬಂದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕಳೆದ ಸೋಮವಾರ ಮತ್ತು ಮಂಗಳವಾರ ಬೆಳಗಾವಿ ನಗರದಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ಹಿನ್ನೆಲೆ ಹಲವು ಅವಾಂತರ ಸೃಷ್ಟಿಸಿತ್ತು. ಅನೇಕ ಕಡೆಗಳಲ್ಲಿ ಮರಗಳು ಬಿದ್ದಿದ್ದರಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದವು. ಇದರ ಪರಿಣಾಮ‌ ನಗರದ ಬಹಳಷ್ಟು ಪ್ರದೇಶಗಳಲ್ಲಿನ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

 


Spread the love

About Laxminews 24x7

Check Also

ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು.

Spread the loveಬೆಳಗಾವಿ :ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ