ಬೆಳಗಾವಿ: ಜಿಲ್ಲೆಯಾದ್ಯಂತ ಬುಧವಾರದಿಂದ ಪ್ರಸಕ್ತ ಸಾಲಿನ ತರಗತಿ ಆರಂಭಗೊಂಡಿದ್ದು, ಮೊದಲ ದಿನವೇ ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗಳತ್ತ ಹೆಜ್ಜೆ ಹಾಕಿದರು.
ಜಿಲ್ಲೆಯ 4,015 ಪ್ರಾಥಮಿಕ, ,1,200 ಪ್ರೌಢ ಸೇರಿದಂತೆ 5,215 ಶಾಲೆಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಇಲ್ಲಿನ ಸರ್ಕಾರಿ ಸರ್ದಾರ್ಸ್ ಪ್ರೌಢಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಹೂವು ನೀಡಿ ಅದ್ಧೂರಿಯಾಗಿ ಬರಮಾಡಿಕೊಂಡರು. ಬೇಸಿಗೆ ರಜೆಯಿಂದಾಗಿ ವಿದ್ಯಾರ್ಥಿಗಳಿಲ್ಲದೆ ಭಣಗುಡುತ್ತಿದ್ದ ಶಾಲೆಯಂಗಳದಲ್ಲಿ ಮಕ್ಕಳ ಕಲರವ ಕಂಡುಬಂತು.
ಕೆಲವೆಡೆ ಸಾಂಕೇತಿಕವಾಗಿ ಪಠ್ಯಪುಸ್ತಕ ವಿತರಿಸಲಾಯಿತು.
Laxmi News 24×7