Breaking News

ಮಂಗಳವಾರ ಮನೆ ಕುಸಿದಿದ್ದು, ಬಾಲಕಿ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

Spread the love

ಕಾಗವಾಡ: ರಭಸದ ಮಳೆ, ಗಾಳಿಯಿಂದಾಗಿ ತಾಲ್ಲೂಕಿನ ಕವಲಗುಡ್ಡದ ಹೊರವಲಯದಲ್ಲಿ ಮಂಗಳವಾರ ಮನೆ ಕುಸಿದಿದ್ದು, ಬಾಲಕಿ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.

ಮಾರುತಿ ಸನದಿ ಅವರಿಗೆ ಸೇರಿದ ಮನೆ ಕುಸಿದಿದ್ದರಿಂದ ಪುತ್ರಿ ಗೀತಾಂಜಲಿ(14) ಕಟ್ಟಡದ ಅವಶೇಷಗಳಡಿ ಸಿಲುಕಿದ್ದಳು.

ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಅಸ್ವಸ್ಥಗೊಂಡ ಬಾಲಕಿಯನ್ನು ಚಿಕಿತ್ಸೆಗಾಗಿ ಅಥಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ತಂದೆ-ತಾಯಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ಮೋಳೆ ಹೊರವಲಯದ ಭಡಕೆಯವರ ತೋಟದ ಹತ್ತಿರವಿರುವ ಶುದ್ಧ ಕುಡಿಯುವ ನೀರಿನ ಘಟಕದ ಮೇಲೆ ಬೃಹತ್ ಮರ ಬಿದ್ದಿದೆ. ಮಳೆಯಿಂದ ಆಶ್ರಯ ಪಡೆಯಲು ಅಲ್ಲಿಯೇ ನಿಂತಿದ್ದ ಒಬ್ಬರು ಹಾಗೂ ಘಟಕ ನಿರ್ವಹಿಸುವ ಇಬ್ಬರಿಗೆ ಗಾಯಗಳಾಗಿವೆ. ಮರದ ಕೊಂಬೆಗಳಡಿ ಸಿಲುಕಿದ್ದ ಅವರನ್ನು ಸ್ಥಳೀಯರು ರಕ್ಷಿಸಿದ್ದು, ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮೀರಜ್‌ ಆಸ್ಪತ್ರೆಗೆ ಸಾಗಿಸಲಾಗಿದೆ.

ಮೋಳೆಯಿಂದ ಕವಲಗುಡ್ಡಕ್ಕೆ ಸಂಪ‍ರ್ಕ ಕಲ್ಪಿಸುವ ರಸ್ತೆಯಲ್ಲಿ ಮರಗಳು ಉರಳಿ ಬಿದ್ದಿದ್ದರಿಂದ ವಾಹನ ಸಂಚಾರ ಸ್ಥಗಿತವಾಗಿತ್ತು. ವಾಹನ ಸವಾರರು ಪರದಾಡಿದರು. ಉಗಾರ ಬಿ.ಕೆ ಗ್ರಾಮದ ಸರ್ಕಾರಿ ಶಾಲೆ ಚಾವಣಿ ಕಿತ್ತು ಹೋಗಿದೆ.

 ಕಾಗವಾಡ ತಾಲ್ಲೂಕಿನ ಮೋಳೆ ಹೊರವಲಯದ ಭಡಕೆಯವರ ತೋಟದ ಹತ್ತಿರವಿರುವ ಶುದ್ಧ ಕುಡಿಯುವ ನೀರಿನ ಘಟಕದ ಮೇಲೆ ಮರ ಬಿದ್ದಿರುವುದು


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ