Breaking News

ಶೆಟ್ಟರ್ ಜೊತೆ ಉಪಹಾರ ಸೇವಿಸಿದ ಮುಖಂಡರು

Spread the love

ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರದ ಮಧುರಾ ಎಸ್ಟೇಟ್’ನಲ್ಲಿರುವ ಕಾಂಗ್ರೆಸ್ ಮುಖಂಡ ಜಗದೀಶ ಶೆಟ್ಟರ್ ನಿವಾಸಕ್ಕೆ ಬುಧವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು.

ಶೆಟ್ಟರ್ ಜೊತೆ ಉಪಹಾರ ಸೇವಿಸಿದ ಮುಖಂಡರು ಅರ್ಧ ತಾಸಿಗೂ ಹೆಚ್ಚು ಹೊತ್ತು ಗೋಪ್ಯ ಚರ್ಚೆ ನಡೆಸಿದರು.

ಸಚಿವರಾದ ಲಕ್ಷ್ಮಿ ಹೆಬ್ಬಾಳಕರ, ಸತೀಶ ಜಾರಕಿಹೊಳಿ ಮತ್ತು ಶಾಸಕ ಎನ್.ಎಚ್. ಕೋನರಡ್ಡಿ ಇದ್ದರು.

‘ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪಕ್ಷದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು’ ಎಂದು ಸ್ಥಳೀಯ ಮುಖಂಡರು ಹಾಗೂ ಬೆಂಬಲಿಗರು ಒತ್ತಡ ಹೇರಿದ್ದಾರೆ. ಶೆಟ್ಟರ್ ಸಹ ಸೂಕ್ತ ಸ್ಥಾನಕ್ಕೆ ಕಾಯುತ್ತೇನೆ ಎಂದು ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ ಅವರ ಭೇಟಿ ಶೆಟ್ಟರ್ ಬೆಂಬಲಿಗರಲ್ಲಿ ಕುತೂಹಲ ಕೆರಳಿಸಿದೆ.

ಶೆಟ್ಟರ್ ನಿವಾಸದ ಎದುರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಜಮಾಯಿಸಿದ್ದಾರೆ


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ