ಬೆಳಗಾವಿ: ಇಲ್ಲಿನ ಸರ್ಕಾರಿ ಸರ್ದಾರ್ಸ್ ಪ್ರೌಢಶಾಲೆಯಿಂದ ಲಿಂಗರಾಜ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ರಸ್ತೆಯಲ್ಲಿ ಜನರು ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ.ಇದೇ ರಸ್ತೆಯಲ್ಲಿ ಆಟದ ಮೈದಾನವಿದೆ.
ಅಕ್ಕ-ಪಕ್ಕದಲ್ಲೇ ಶಿಕ್ಷಣ ಸಂಸ್ಥೆಗಳಿವೆ. ಈ ರಸ್ತೆ ಸದಾ ಜನದಟ್ಟಣೆಯಿಂದ ಕೂಡಿರುತ್ತದೆ. ಆದರೆ, ಕೆಲವರು ದ್ವಿಚಕ್ರ ವಾಹನ ಮತ್ತು ಕಾರುಗಳನ್ನು ರಸ್ತೆಬದಿ ಬೇಕಾಬಿಟ್ಟಿಯಾಗಿ ನಿಲ್ಲಿಸುತ್ತಿರುವುದರಿಂದ ಸಂಚಾರ ಸಮಸ್ಯೆ ತಲೆದೋರುತ್ತಿದೆ.
ಸಂಬಂಧಿತ ಅಧಿಕಾರಿಗಳು ಇತ್ತ ಗಮನಹರಿಸಿ, ಮನಬಂದಂತೆ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು.
Laxmi News 24×7