Breaking News

ಆಟೋ ಚಾಲಕನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿದ ಹಿನ್ನೆಲೆ ; ಪೊಲೀಸ್ ಸಿಬ್ಬಂದಿ ಅಮಾನತು.!

Spread the love

ಮಂಡ್ಯ : ಮಂಡ್ಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆಯೊಬ್ಬರು, ಆಟೋ ಚಾಲಕನಿಗೆ ನಡು ರಸ್ತೆಯಲ್ಲೇ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿದ ಹಿನ್ನೆಲೆ ಅವರನ್ನು ಅಮಾನತು ಮಾಡಲಾಗಿದೆ.

ಪೊಲೀಸ್ ಕಾನ್ಸ್ಟೇಬಲ್ ಮಹೇಂದ್ರ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರು ಅಮಾನತು ಮಾಡಿದ್ದಾರೆ.

ಪೊಲೀಸ್ ಕಾನ್ಸ್‌ಸ್ಟೇಬಲ್‌ ಸಾರ್ವಜನಿಕವಾಗಿ ಎಲ್ಲರ ಮುಂದೆ ಹಲ್ಲೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಕೆಲವರು ಟ್ವೀಟ್‌ ಮೂಲಕ ಮಂಡ್ಯ ಎಸ್‌ಪಿ ಹಾಗೂ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ಈ ಕೃತ್ಯವನ್ನು ತಂದು ಕ್ರಮಕ್ಕೆ ಆಗ್ರಹಿಸಿದ್ದರು ಎನ್ನಲಾಗಿದೆ.

ಘಟನೆಯ ಹಿನ್ನೆಲೆ :
ಮಂಡ್ಯ ಜಿಲ್ಲಾಸ್ಪತ್ರೆಯ ಎದುರು ಆಟೋ ಚಾಲಕ ಮತ್ತು ಪೊಲೀಸರು ತೆರಳುತ್ತಿದ್ದ ಬೈಕ್‌ ನಡುವೆ ಅಪಘಾತವಾಗಿದೆ. ಪೊಲೀಸ್‌ ಪೇದೆ ರಸ್ತೆಗೆ ಬಿದ್ದು, ಕಾಲಿಗೆ ಸಣ್ಣ ಪೆಟ್ಟಾಗಿದೆ. ಸ್ಥಳೀಯರು ಪೇದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಆಟೋ ಚಾಲಕನಿಗೆ ಹೇಳಿದ್ದಾರೆ.

 

 

ಅದರಂತೆ ಚಾಲಕ ಪೇದೆಯನ್ನು ಆಸ್ಪತ್ರೆಗೆ ಹೋಗೋಣ ಬನ್ನಿ ಎಂದು ಕರೆದಿದ್ದಾರೆ. ಆತ ಕರೆದಾಗ ಸಿಟ್ಟಿಗೆದ್ದ ಪೇದೆ, ಚಾಲಕನ ಕಪಾಳಕ್ಕೆ ಹೊಡೆದು, ಹೊಟ್ಟೆಗೆ ಗುದ್ದಿದ್ದಾರೆ. ತಪ್ಪಾಯ್ತು ಬಿಡಿ ಸಾರ್ ಎಂದರೂ ಸುಮ್ಮನಾಗದೇ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ.


Spread the love

About Laxminews 24x7

Check Also

2025 – 26 ಹಂಗಾಮಿನಲ್ಲಿ ರೈತರಿಗೆ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿ ಸರ್ಕಾರದಿಂದ ಅಧಿಕೃತ ಆದೇಶ

Spread the love ಬೆಂಗಳೂರು: 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ