Breaking News

ರಕ್ಕಸಕೊಪ್ಪ ಜಲಾಶಯದಲ್ಲಿ ನೀರಿನ ಮಟ್ಟ ವ್ಯಾಪಕವಾಗಿ ಕುಸಿತ

Spread the love

ಬೆಳಗಾವಿ: ಬೆಳಗಾವಿ ಮಹಾನಗರಕ್ಕೆ ನೀರು ಪೂರೈಸುವ ರಕ್ಕಸಕೊಪ್ಪ ಜಲಾಶಯದಲ್ಲಿ ನೀರಿನ ಮಟ್ಟ ವ್ಯಾಪಕವಾಗಿ ಕುಸಿತಕ್ಕೊಳಗಾಗಿದೆ.

ಈ ಬಾರಿಯ ಮುಂಗಾರು ಸಕಾಲದಲ್ಲಿ ಬಿರುಸು ಪಡೆಯದೆ ಕೈಕೊಟ್ಟಲ್ಲಿ ಬೆಳಗಾವಿ ಮಹಾನಗರ ನೀರಿಗೆ ಬರ ಎದುರಿಸುವ ಪರಿಸ್ಥಿತಿ ಎದುರಾಗುವ ಸಾಧ್ಯತೆಗಳು ಕಂಡುಬಂದಿವೆ.

ಈ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಶೋಭಾ ಸೋಮನಾಚೆ ಹಾಗೂ ಉಪಮೇಯರ್ ರೇಷ್ಮಾ ಪಾಟೀಲ್ ಅವರು ರಕ್ಕಸಕೊಪ್ಪ ಜಲಾಶಯಕ್ಕೆ ಭೇಟಿ ನೀಡಿ ಸ್ಥಿತಿಗತಿಗಳ ಪರಿಶೀಲನೆ ನಡೆಸಿದರು. ಕೆಯುಐಡಿಎಫ್‌ಸಿ ಅಧೀಕ್ಷಕ ಎಂಜಿನಿಯರ್ ಅಶೋಕ್ ಬರ್ಕುಳೆ ಹಾಗೂ ಇತರ ಅಧಿಕಾರಿಗಳು ಈ ವೇಳೆ ಹಾಜರಿದ್ದರು.

ರಕ್ಕಸಕೊಪ್ಪ ಜಲಾಶಯ  68 ಎಂಎಲ್‌ಡಿ ನೀರು ಸರಬರಾಜು ಸಾಮರ್ಥ್ಯ ಹೊಂದಿದೆ. ಹೀಗಾಗಿ ರಕ್ಕಸಕೊಪ್ಪ ಜಲಾಶಯದಿಂದ 55 ಎಂಎಲ್‌ಡಿ ನೀರನ್ನು ನಗರಕ್ಕೆ ಸರಬರಾಜು ಮಾಡಲಾಗುತ್ತಿತ್ತು. ಆದರೆ ಪ್ರಸ್ತುತ ನೀರಿನ ಮಟ್ಟ ವ್ಯಾಪಕ ಕುಸಿತಕ್ಕೊಳಗಾಗಿದ್ದು 30 ಎಂಎಲ್‌ಡಿ ನೀರು ಮಾತ್ರ ಪೂರೈಕೆ ಮಾಡಲಾಗುತ್ತಿದೆ.

ಒಂದೊಮ್ಮೆ ಸಕಾಲದಲ್ಲಿ ಮಳೆಯಾಗಿ ಜಲಾಶಯದ ಮಟ್ಟದಲ್ಲಿ ಏರಿಕೆಯಾಗದಿದ್ದಲ್ಲಿ ಯಾವ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಚರ್ಚೆ ನಡೆಸಲು ಮುಂದಾಗಿದ್ದಾರೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ