Breaking News

ರಕ್ತದಾನ ಶಿಬಿರದಲ್ಲಿ ತಾವೇ ರಕ್ತದಾನ ಮಾಡಿದ ಸ್ವಾಮೀಜಿ

Spread the love

ಬೆಳಗಾವಿ‌ ಜಿಲ್ಲೆಯ ‌ಬೈಲಹೊಂಗಲ ತಾಲೂಕಿನ ನಯಾನಗರದ ಸುಖದೇವಾನಂದ ಆಶ್ರಮದಲ್ಲಿ ಶ್ರೀ ಅಭಿನವ ಸಿದ್ದಲಿಂಗ ಮಹಾಸ್ವಾಮೀಜಿ ಅವರ‌ 39 ನೇ ವರ್ಷದ ಜನ್ಮದಿನಾಚರಣೆ ಆಚರಿಸಲಾಯಿತು.

ಜನ್ಮದಿನದ ಪ್ರಯುಕ್ತ ಬೆಳವಡಿ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ‌ ಶಿಬಿರ ಏರ್ಪಡಿಸಲಾಗಿತ್ತು. ಈ ರಕ್ತದಾನ ಶಿಬಿರದಲ್ಲಿ ಶ್ರೀಗಳು ಖುದ್ದು ತಾವೂ ಸಹ ರಕ್ತದಾನ ಮಾಡಿದರು.
ಜೊತೆಗೆ ಮಠಕ್ಕೆ ಆಗಮಿಸಿದ ನೂರಾರು ಭಕ್ತರು ‌ಪಾಲ್ಗೊಂಡು, ರಕ್ತದಾನ ಮಾಡಿದರು.ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀಗಳು SSLC ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿದರು.
ಅಲ್ಲದೇ ಜನ್ಮದಿನದ ಸಂಭ್ರಮಕ್ಕೆ ಬಂದ ಭಕ್ತರಿಗೆ ಸಸಿಗಳನ್ನು ವಿತರಿಸಲಾಯಿತು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ