Breaking News

ಕೌಟುಂಬಿಕ ಕಲಹ: ಪತ್ನಿ ಕೊಂದು ಪೊಲೀಸರಿಗೆ ಶರಣಾದ ಪತಿ

Spread the love

ಬೆಳಗಾವಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ.

ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಬಸವ್ವ ಹಣಮಂತ ಹಿಡಕಲ್(30) ಕೊಲೆಯಾದ ದುರ್ದೈವಿ. ಹಣಮಂತ ಸಿದ್ದಪ್ಪ ಹಿಡಕಲ್( 35) ಕೊಲೆ ಆರೋಪಿ.

ಪ್ರಕರಣದ ವಿವರ: ಪತಿ ಹಣಮಂತ ಯಾವುದೇ ಕೆಲಸ ಮಾಡದೇ ಓಡಾಡಿಕೊಂಡಿದ್ದನಂತೆ. ಪತ್ನಿ ಬಸವ್ವ ಕೂಲಿ ಕೆಲಸ ಮಾಡಿ ಸಂಸಾರದ ಬಂಡಿ ಸಾಗಿಸುತ್ತಿದ್ದರು. ಪತಿ ಹಣಮಂತನಿಗೆ ನೀನು ಕೆಲಸ ಮಾಡುತ್ತಿಲ್ಲ ಎಂದು ಆಗಾಗ ಬಸವ್ವ ತಗಾದೆ ತೆಗೆಯುತ್ತಿದ್ದರಂತೆ. ಇದರಿಂದ ದಂಪತಿಯ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಹೀಗೆ ಶುಕ್ರವಾರ ನಡೆದ ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಈ ದಂಪತಿಗೆ 10 ವರ್ಷದ ಒಬ್ಬ ಮಗನಿದ್ದಾನೆ. ಪ್ರಕರಣದಲ್ಲಿ ತಾಯಿ ಮೃತಪಟ್ಟು ತಂದೆ ಜೈಲು ಪಾಲಾಗಿದ್ದಾರೆ. ಇದರಿಂದ 10 ವರ್ಷದ ಬಾಲಕ ಅನಾಥನಾಗಿದ್ದಾನೆ. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ವ್ಯಕ್ತಿಯ ಬರ್ಬರ ಹತ್ಯೆ: ಹಸೆಮಣೆ ಏರಬೇಕಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ನಿಂಗಪ್ಪ ಬೂದಪ್ಪ ನವಲೂರ (28) ಕೊಲೆೆಯಾದ ವ್ಯಕ್ತಿ. ದುಷ್ಕರ್ಮಿಗಳು ತೋಟದ ಮನೆಯಲ್ಲಿ ಕಣ್ಣಿಗೆ ಕಾರದ ಪುಡಿ ಎರಚಿ ಬಳಿಕ ಕತ್ತು ಹಿಸುಕಿ ಕೊಂದಿದ್ದಾರೆ ಎನ್ನಲಾಗಿತ್ತು. ತಾವರಗೇರೆ ಗ್ರಾಮದ ಯುವತಿ ಜತೆ ಮದುವೆ ನಿಶ್ಚಯವಾಗಿತ್ತು. ಜೂನ್ 7 ರಂದು ಮದುವೆ ನಡೆಯಬೇಕಿತ್ತು. ಗುರುವಾರ(ಮೇ 1) ಮಧ್ಯರಾತ್ರಿ ಕೊಲೆ ನಡೆದಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

Spread the loveಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ