Breaking News
Home / ರಾಜಕೀಯ / ಹಳೆಯ ದ್ವೇಷಕ್ಕೆ 200 ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು!

ಹಳೆಯ ದ್ವೇಷಕ್ಕೆ 200 ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು!

Spread the love

ದಾವಣಗೆರೆ: ಇಬ್ಬರು ವ್ಯಕ್ತಿಗಳ ನಡುವೆ ಇದ್ದ ಹಳೆಯ ದ್ವೇಷಕ್ಕೆ ತೋಟದಲ್ಲಿ ಬೆಳೆದಿದ್ದ ಅಡಿಕೆ ಗಿಡಗಳು ನಾಶವಾಗಿವೆ.

ದಾವಣಗೆರೆ ತಾಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಳೆಯ ದ್ವೇಷವನ್ನೇ ಗುರಿಯಾಗಿಸಿಕೊಂಡ ಕಿಡಿಗೇಡಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ನಾಶಗೊಂಡ ಅಡಿಕೆ ತೋಟವು ರೈತ ಹಾಲೇಶಪ್ಪ ಎಂಬವರಿಗೆ ಸೇರಿದ್ದಾಗಿದ್ದು, ಸುಮಾರು 200 ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ.

ಎರಡು ಎಕರೆ ಅಡಿಕೆ ತೋಟ ಮಾಡಿದ್ದ ಹಾಲೇಶಪ್ಪ ಬೆಳೆಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದರು. ಮೂರು ವರ್ಷದ ಅಡಿಕೆ ಗಿಡಗಳು ದ್ವೇಷಕ್ಕೆ ಬಲಿಯಾಗಿರುವುದು ಹಾಲೇಶಪ್ಪ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಬೆಳೆ ನಾಶದ ಪರಿಹಾರಕ್ಕಾಗಿ ಅವರು ಕಾದುಕುಳಿತಿದ್ದು ಯಾವೊಬ್ಬ ಅಧಿಕಾರಿಯೂ ಅತ್ತ ಸುಳಿಯದೇ ಇರುವುದು ಅವರಲ್ಲಿ ಮತ್ತಷ್ಟು ಬೇಸರ ಮೂಡಿಸಿದೆ. ಈ ಕೃತ್ಯದಿಂದ ಮನ ನೊಂದಿರುವ ರೈತ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ರಾತ್ರೋ ರಾತ್ರಿ 200 ಅಡಿಕೆ ಗಿಡಗಳು ನಾಶ: ರೈತ ಹಾಲೇಶಪ್ಪ ತಮ್ಮ ಜಮೀನಿನಲ್ಲಿ ಎರಡು ವರ್ಷಗಳ ಹಿಂದೆ ಅಡಿಕೆ ಗಿಡಗಳನ್ನು ಹಾಕಿದ್ದರು. ಈಗಾಗಲೇ ಗಿಡಗಳು ಎದೆಯೆತ್ತರಕ್ಕೆ ಬೆಳೆದಿದ್ದವು. ಕಂಡ ಕೆಲ ಕಿಡಿಗೇಡಿಗಳು ಹಳೆಯ ದ್ವೇಷಕ್ಕೆ ಉತ್ತಮ ಫಸಲು ನೀಡಲು ತಯಾರಾಗಿದ್ದ ಅಡಿಕೆ ಗಿಡಗಳನ್ನೇ ರಾತ್ರೋ ರಾತ್ರಿ ಕಡಿದು ಹಾಕಿದ್ದಾರೆ. ಬೆಳಗ್ಗೆ ಹಾಲೇಶಪ್ಪನವರು ಜಮೀನಿಗೆ ಆಗಮಿಸಿದ್ದ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ. ಮಕ್ಕಳಂತೆ ಸಾಕಿದ್ದ ಗಿಡಗಳು ನೆಲಕ್ಕುರುಳಿರುವುದನ್ನು ಕಂಡು ಮಾಲೀಕ ಕಣ್ಣೀರು ಹಾಕಿದ್ದಾರೆ. ಕೂಡಲೇ ಅವರು ಸ್ಥಳೀಯ ಪೊಲೀಸರ ಗಮನಕ್ಕೆ ತಂದಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ